Maha Kumbh ಕಾಲ್ತುಳಿತ ಹಿಂದೆ ಪಿತೂರಿ?: 16,000 ಮೊಬೈಲ್ ನಂಬರ್ ಗಳ ಮೇಲೆ ತನಿಖಾ ಆಯೋಗದ ಕಣ್ಣು!

ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳಿಂದ ಶಂಕಿತರನ್ನು facial recognition app ಮೂಲಕ ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Mahakumbh stampede
ಮಹಾಕುಂಭಮೇಳ ಕಾಲ್ತುಳಿತ online desk
Updated on

ಪ್ರಯಾಗ್ ರಾಜ್: ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ದಿನದಂದು (ಜ.29) ಸಂಭವಿಸಿದ ಕಾಲ್ತುಳಿತ ದುರಂತದ ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ತನಿಖೆಗೆ ಆದೇಶಿಸಿದ್ದು, ತನಿಖಾಧಿಕಾರಿಗಳು ಪಿತೂರಿ ನಡೆದಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ತನಿಖಾ ತಂಡ ಕಾಲ್ತುಳಿತದ ದಿನದಂದು ಸಂಗಮದ ತುದಿ ಭಾಗದಲ್ಲಿ ಸಕ್ರಿಯವಾಗಿದ್ದ 16,000 ಮೊಬೈಲ್ ನಂಬರ್ ಗಳ ಮೇಲೆ ಕಣ್ಣಿಟ್ಟಿದ್ದು, ಈ ಕುರಿತ ಡೇಟಾ ಅನಾಲಿಸಿಸ್ ನಡೆಸುತ್ತಿದೆ.

ಸಂಗಮದ ತಟದಲ್ಲಿ ಅಂದು ಸಕ್ರಿಯವಾಗಿದ್ದ ಮೊಬೈಲ್ ನಂಬರ್ ಗಳ ಪೈಕಿ ಹಲವು ನಂಬರ್ ಗಳು ಈಗ ಸ್ವಿಚ್ ಆಫ್ ಆಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ.

ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳಿಂದ ಶಂಕಿತರನ್ನು facial recognition app ಮೂಲಕ ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ವಸಂತ ಪಂಚಮಿಯ ಸಂದರ್ಭದಲ್ಲಿ ಸೋಮವಾರ ಬೆಳಿಗ್ಗೆ ನಡೆಯಲಿರುವ ಮೂರನೇ ಅಮೃತ ಸ್ನಾನಕ್ಕೆ ಮುಂಚಿತವಾಗಿ ಆವರಣಕ್ಕೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪೊಲೀಸರನ್ನು ಹೆಚ್ಚಿನ ಕಟ್ಟೆಚ್ಚರದಲ್ಲಿರಿಸಲಾಗಿದೆ.

ನಾಲ್ಕನೇ ಅಮೃತ ಸ್ನಾನ ಫೆಬ್ರವರಿ 12 ರಂದು ಮಾಘ ಪೂರ್ಣಿಮೆಯಂದು ನಡೆಯಲಿದ್ದರೆ, ಕೊನೆಯದು ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ನಡೆಯಲಿದೆ.

Mahakumbh stampede
ಮಹಾ ಕುಂಭ ಮೇಳ ಕಾಲ್ತುಳಿತ: PIL ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಮೌನಿ ಅಮಾವಾಸ್ಯೆಯ ಅಮೃತ ಸ್ನಾನದಿನಂದು ಪವಿತ್ರ ಸ್ನಾನಕ್ಕಾಗಿ ಜನರು ಸೇರಿದ್ದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಜನಸಮೂಹವು ಬ್ಯಾರಿಕೇಡ್‌ಗಳನ್ನು ಹಾರಿ, ಇನ್ನೊಂದು ಬದಿಯಲ್ಲಿ ತಮ್ಮ ಸರದಿಗಾಗಿ ಕಾಯುತ್ತಿದ್ದವರಿಗೆ ಅನಾನುಕೂಲ ಉಂಟುಮಾಡಿತು.

ಕಾಲ್ತುಳಿತ ಘಟನೆಯ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಘಟನೆಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಮಿತಿಯು ತನ್ನ ತನಿಖೆಯನ್ನು ಮುಗಿಸಿ ವರದಿಯನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವಿದೆ. 12 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಗಿ ಫೆ.26 ವರೆಗೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com