ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.
Kejriwal
ಅರವಿಂದ ಕೇಜ್ರಿವಾಲ್
Updated on

ನವದೆಹಲಿ: ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಗುಂಡಾಗಿರಿಯಲ್ಲಿ ತೊಡಗಿರುವ ಬಿಜೆಪಿ, ಎಎಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ಆದಾಗ್ಯೂ ಭಯದಲ್ಲಿರುವ ಪೊಲೀಸರು, ಪರಿಸ್ಥಿತಿ ನಿರ್ವಹಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ ಎಂದರು. "ಈ ದೇಶದ ಕಾನೂನಿಗೆ ಹೆದರದ ಈ ದೊಡ್ಡ ಗೂಂಡಾ ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ಎಎಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಬಹಿರಂಗವಾಗಿ ಹಲ್ಲೆ ನಡೆಸುತ್ತಿರುವ ಈ ಗೂಂಡಾ ಯಾರು? ದೆಹಲಿ ಪೊಲೀಸರು ಆದೇಶವನ್ನು ಸ್ವೀಕರಿಸುವ ಮತ್ತು ಭಯಪಡುತ್ತಿರುವ ಈ ಗೂಂಡಾ ಯಾರು? ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

Kejriwal
ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ ಎಂದರು. "ಈ ದೇಶದ ಕಾನೂನಿಗೆ ಹೆದರದ ಈ ದೊಡ್ಡ ಗೂಂಡಾ ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ಎಎಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಬಹಿರಂಗವಾಗಿ ಹಲ್ಲೆ ನಡೆಸುತ್ತಿರುವ ಈ ಗೂಂಡಾ ಯಾರು? ದೆಹಲಿ ಪೊಲೀಸರು ಆದೇಶವನ್ನು ಸ್ವೀಕರಿಸುವ ಮತ್ತು ಭಯಪಡುತ್ತಿರುವ ಈ ಗೂಂಡಾ ಯಾರು? ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

ದೆಹಲಿಯಲ್ಲಿ ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ 25,000 ರೂಪಾಯಿ ಉಳಿಸುತ್ತಿದ್ದರೆ ಮತ್ತೊಂದು ಕಡೆ ಇನ್ನೂಂದು ಪಕ್ಷ ಗೂಂಡಾಗಿರಿಯಲ್ಲಿ ತೊಡಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ ಕೇಜ್ರಿವಾಲ್, ನಿವೃತ್ತಿ ನಂತರದ ಕೆಲಸಕ್ಕಾಗಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ. ದೇಶದ ಭವಿಷ್ಯವನ್ನು ಪಣಕ್ಕಿಡಬೇಡಿ" ಎಂದು ಹೇಳಿದರು.

ದೆಹಲಿಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮತದಾರರನ್ನು ಒಲಿಸಿಕೊಳ್ಳಲು ಎಲ್ಲಾ ಮೂರು ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com