
ನವದೆಹಲಿ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಹೊಸದನ್ನು ಗುರಿಯಾಗಿಟ್ಟುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭದ್ರತಾ ಪಡೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಮ್ಮು-ಕಾಶ್ಮೀರ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ, ಶೂನ್ಯ ಒಳನುಸುಳುವಿಕೆ ಗುರಿಯೊಂದಿಗೆ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಕೇಂದ್ರ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿದ್ದು, ಶೂನ್ಯ ಒಳನುಸುಳುವಿಕೆಯನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಹೆಚ್ಚಿಸಲು ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು.
ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ವಿರುದ್ಧ ನಿರ್ದಯದೊಂದಿಗೆ ಹೆಚ್ಚು ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳುವಂತೆ ಎಲ್ಲಾ ಭದ್ರತಾ ಏಜೆನ್ಸಿಗಳಿಗೆ ಶಾ ಸೂಚಿಸಿದರು. ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ 'ಭಯೋತ್ಪಾದಕರ ಅಸ್ತಿತ್ವವನ್ನು ಬೇರು ಸಮೇತ ಕಿತ್ತು ಹಾಕುವುದು ನಮ್ಮ ಗುರಿಯಾಗಬೇಕು" ಎಂದು ಹೇಳಿದರು.
ಮಾದಕ ವಸ್ತು ಸಾಗಣೆ ಜಾಲ ಒಳನುಸುಳುಕೋರರು ಮತ್ತು ಭಯೋತ್ಪಾದಕರಿಗೆ ತಮ್ಮ ಚಟುವಟಿಕೆ ನಡೆಸಲು ಬೆಂಬಲ ನೀಡುತ್ತಿದೆ. ಮಾದಕ ವಸ್ತು ಮಾರಾಟದಿಂದ ಬರುವ ಆಧಾಯದಿಂದ ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲಾಗುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
Advertisement