ಮೋದಿ ದೇಶದ ಅತ್ಯಂತ ದೊಡ್ಡ ನಾಯಕ: ರಾಜ್ಯಸಭೆಯಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದ ದೇವೇಗೌಡ

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹಿಂದುಳಿದ ವರ್ಗ’ಕ್ಕೆ ಸೇರಿದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ ಪ್ರಧಾನಿಯನ್ನು ಅಭಿನಂದಿಸಬೇಕು ಎಂದರು.
ರಾಜ್ಯಸಭೆಯಲ್ಲಿ ಎಚ್‌ಡಿ ದೇವೇಗೌಡ
ರಾಜ್ಯಸಭೆಯಲ್ಲಿ ಎಚ್‌ಡಿ ದೇವೇಗೌಡ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಹೊಗಳಿದ್ದು, ತಮ್ಮ ಅಗಾಧ ನಾಯಕತ್ವದ ಅನುಭವಗಳೊಂದಿಗೆ ದೇಶವನ್ನು ಮುನ್ನಡೆಸಬಲ್ಲ 'ಅತ್ಯಂತ ದೊಡ್ಡ ನಾಯಕ' ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹಿಂದುಳಿದ ವರ್ಗ’ಕ್ಕೆ ಸೇರಿದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ ಪ್ರಧಾನಿ ಮೋದಿಯವರನ್ನು ಅಭಿನಂದಿಸಬೇಕು ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕೋಮುವಾದ ಮತ್ತು ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವರು (ಮೋದಿ) ಮೂರನೇ ಅವಧಿಗೆ ಪೂರ್ಣ ಬಹುಮತವನ್ನು ಪಡೆಯದಿದ್ದಾಗ, ಪ್ರಾದೇಶಿಕ ಪಕ್ಷಗಳು ಅವರನ್ನು ಬೆಂಬಲಿಸಲು ಒಗ್ಗೂಡಿದವು ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಮಿತ್ರಪಕ್ಷವಾಗಿದೆ.

ಪ್ರಧಾನಿಯಾಗಿ ಮತ್ತು ಮುಖ್ಯಮಂತ್ರಿಯಾಗಿ ಅನುಭವ ಪಡೆದಿರುವ ನರೇಂದ್ರ ಮೋದಿ ಅವರಿಗೆ ಆಡಳಿತವನ್ನು ಹೇಗೆ ನಡೆಸಬೇಕೆಂದು ತಿಳಿದಿದೆ. ಈ ದೇಶದ ಏಕೈಕ ಮಹಾನ್ ನಾಯಕ ಅವರಾಗಿದ್ದು, ದೇಶವನ್ನು ನಡೆಸುವ ಸಾಮರ್ಥ್ಯ ಅವರಿಗಿದೆ ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಎಚ್‌ಡಿ ದೇವೇಗೌಡ
ಎಚ್‌ಡಿ ಕುಮಾರಸ್ವಾಮಿ ಮಟ್ಟ ಹಾಕುವುದು ಅಸಾಧ್ಯ: ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ

ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಮಧ್ಯಮ ವರ್ಗ, ಯುವಕರು, ಮಹಿಳೆಯರು ಸೇರಿದಂತೆ ಇತರರಿಗೆ ಆದ್ಯತೆ ನೀಡಿದ್ದಾರೆ ಮತ್ತು ಈ ಗುರಿಗಳನ್ನು ಸಾಧಿಸಲು ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ಹೊಂದಿರುವುದು ಅಗತ್ಯವಾಗಿದೆ. ನಮ್ಮಂತಹ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಈ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದರು.

ತಮ್ಮ ಜೀವನದ ಆರಂಭಿಕ ವರ್ಷಗಳಲ್ಲಿ ಎದುರಾದ ಸವಾಲುಗಳು, ರಾಜಕೀಯ ಹೋರಾಟಗಳು ಮತ್ತು ಪ್ರಧಾನ ಮಂತ್ರಿಯಾಗಿ ಮಾಡಿದ ಕೆಲಸಗಳನ್ನು ಎತ್ತಿ ತೋರಿಸಿದ ಅವರು, ಪ್ರಧಾನಿಯಾಗಿ ಒಂದು ವರ್ಷಕ್ಕಿಂತ ಕಡಿಮೆ ಅವಧಿ ಅಧಿಕಾರದಲ್ಲಿದ್ದರೂ, ಆ ಅಲ್ಪಾವಧಿಯಲ್ಲಿಯೂ ರಾಜಸ್ಥಾನದ ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡಲಾಯಿತು ಎಂದು ಹೇಳಿದರು.

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿದರು. ಈ ವೇಳೆ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಮುಖ್ಯ ವಿಷಯದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹಲವಾರು ಕಾಂಗ್ರೆಸ್ ಸಂಸದರು ಆಕ್ಷೇಪಿಸಿದರು.

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಕುರಿತು ಮಾತನಾಡಿದ ಗೌಡರು, ಪ್ರಧಾನಿ ಮೋದಿಯಿಂದ ಮಾತ್ರ ಈ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com