ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.
Amit Kumar Sarkar
ಆರೋಪಿ ಅಮಿತ್ ಕುಮಾರ್ ಸರ್ಕಾರ್
Updated on

ಕೊಲ್ಕೋತ್ತಾ: ರಜೆ ಕೊಡಲಿಲ್ಲವೆಂದು ಸರ್ಕಾರಿ ನೌಕರನೊಬ್ಬ ತನ್ನ ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಧಾನ್ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಕೈಯಲ್ಲಿ ರಕ್ತಸಿಕ್ತ ಚಾಕು ಹಿಡಿದುಕೊಂಡು ನಗರದ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವ್ಯಕ್ತಿಯನ್ನು ನೋಡಿ ಜನರು ಭಯಭೀತರಾಗಿದ್ದರು. ಚಾಕುವನ್ನು ಎಸೆಯುವಂತೆ ಅವರು ಕೇಳಿಕೊಳ್ಳುತ್ತಿದ್ದರು.

ಚಾಕು ದಾಳಿಯಲ್ಲಿ ಗಾಯಗೊಂಡವರನ್ನು ಜಯದೇವ್ ಚಕ್ರವರ್ತಿ, ಸಂತನು ಸಹಾ, ಸಾರ್ಥ ಲೇಟ್ ಮತ್ತು ಶೇಖ್ ಸತ್ಬುಲ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆಯಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಆರೋಪಿ ಅಮಿತ್ ಸರ್ಕಾರ್ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಂಚಾರ ಪೊಲೀಸರು ಚಾಕುವನ್ನು ಕೆಳಗೆ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಬಳಿಕ ಬಂಧಿಸಿದ್ದಾರೆ, ಆದೇಶವನ್ನು ಪಾಲಿಸಿದ ಅಮಿತ್ ಕುಮಾರ್ ಪೊಲೀಸರಿಗೆ ಶರಣಾಗಿದ್ದಾನೆ. ಅಮಿತ್ ರಜೆ ಕೇಳಿದ್ದರು, ಆದರೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

Amit Kumar Sarkar
ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಮಹಿಳೆ ಬಂಧನ

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದಲ್ಲಿರುವ ತಮ್ಮ ಕಚೇರಿಯೊಳಗೆ ತಮ್ಮ ಸಹೋದ್ಯೋಗಗಳೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಚಾಕುವಿನಿಂದ ಇರಿದಿದ್ದಾರೆ. ಅಮಿತ್ ಸರ್ಕಾರ್ ಅವರ ಚಾಕು ದಾಳಿಯ ಸಮಯದಲ್ಲಿ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರಿಗೂ ಗಾಯವಾಗಿದೆ.

ಪೊಲೀಸ್ ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಸಹೋದ್ಯೋಗಿಗಳು ತನ್ನ ತಂದೆಯ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾನೆ, ಇದು ಅವನನ್ನು ಕೋಪಗೊಳಿಸಿತು. ಈ ಪ್ರಕರಣದಲ್ಲಿನ ಆರೋಪಗಳು ಮತ್ತು ಪ್ರತಿ-ಆರೋಪಗಳನ್ನು ತನಿಖಾ ಸಂಸ್ಥೆಗಳು ಇನ್ನೂ ಪರಿಶೀಲಿಸಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com