
ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ 'ಎಲ್ಲರಿಗೂ ಸೂರು' ಒದಗಿಸುವ ಉದ್ದೇಶ ಸಾಧನೆಗಾಗಿ ಫೆಬ್ರವರಿ 2 ರವರೆಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆಯಾಗಿದ್ದ 3.79 ಕೋಟಿ ಮನೆಗಳ ಪೈಕಿ 3.34 ಕೋಟಿ ಮನೆಗಳು ಮಂಜೂರು ಆಗಿದ್ದು, ಇಲ್ಲಿಯವರೆಗೂ 2.69 ಕೋಟಿ ಮನೆಗಳ ನಿರ್ಮಾಣ ಸಂಪೂರ್ಣವಾಗಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.
ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಏಪ್ರಿಲ್ 1, 2016 ರಿಂದ ಅನುಷ್ಠಾನಗೊಳಿಸಿದ ಪ್ರಧಾನಮಂತ್ರಿ ಅವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2.95 ಕೋಟಿ ಅರ್ಹ ಗ್ರಾಮೀಣ ವಸತಿ ರಹಿತರಿಗೆ ಆರ್ಥಿಕ ನೆರವು ಒದಗಿಸಲಾಗಿದೆ.
ಮಾರ್ಚ್ 31, 2024 ರಂತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರ್ಹ ಫಲಾನುಭವಿಗಳಿಗೆ ಎಲ್ಲಾ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಡಾ.ಚಂದ್ರಶೇಖರ್ ಪೆಮ್ಮಸಾನಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
2024-25 ರಿಂದ 2028-29 ರ ಅವಧಿಯಲ್ಲಿ ಹೆಚ್ಚುವರಿ 2 ಕೋಟಿ ಮನೆಗಳ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ( PMAY-G)ಅನುಷ್ಠಾನದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
2024-25ರ ಅವಧಿಯಲ್ಲಿಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 84,37,139 ಮನೆಗಳ ಗುರಿಯನ್ನು ಸಚಿವಾಲಯ ನಿಗದಿಪಡಿಸಿದೆ.
Advertisement