
ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಕ್ವಿಲಾ ಪ್ರದೇಶದಲ್ಲಿ ಗಾಳಿಪಟದ ದಾರ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರು ಸಹ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಳಿಪಟದ ದಾರಗಳಿಗೆ ಲೇಪಿಸಲು ಸಲ್ಫರ್, ಪೊಟ್ಯಾಶ್ ಮತ್ತು ಗಾಜು ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಸಂಚಾರ) ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂರನೇ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಕಾರ್ಖಾನೆ ಮಾಲೀಕ ಅತಿಕ್ ರಜಾ ಖಾನ್(45) ಮತ್ತು ಅವರ ಕೆಲಸಗಾರರಾದ ಫೈಜಾನ್(25) ಮತ್ತು ಸರ್ತಾಜ್(20) ಎಂದು ಗುರುತಿಸಲಾಗಿದೆ.
ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವೃತ್ತ ಅಧಿಕಾರಿ(ಎರಡನೇ) ಸಂದೀಪ್ ಕುಮಾರ್ ತಿಳಿಸಿದ್ದಾರೆ.
Advertisement