
ಲಖನೌ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದೊಂದಿಗೆ ಉತ್ತರ ಪ್ರದೇಶದ ವಿಧಾನಸಭೆಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ.
ಮಿಲ್ಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರಿ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈ ಕ್ಷೇತ್ರ ಅಯೋಧ್ಯೆಯ ನೆರೆಯ ಕ್ಷೇತ್ರವಾಗಿದ್ದು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆ ಒಳಪಡುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಮಾಜವಾದಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಲು ಕಂಡಿತ್ತು.
ಈಗ ವಿಧಾನಸಭಾ ಉಪಚುನಾವಣೆಯಲ್ಲಿ ಅಯೋಧ್ಯೆ ಪಕ್ಕದ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಫೈಜಾಬಾದ್ ಲೋಕಸಭ ಕ್ಷೇತ್ರದಲ್ಲಿನ ಸೋಲಿಗೆ ಬಿಜೆಪಿ ಪ್ರತೀಕಾರ ಪಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಮಿಲ್ಕಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಭಾನು ಪಾಸ್ವಾನ್ ಎಸ್ ಪಿ ಅಭ್ಯರ್ಥಿ ವಿರುದ್ಧ 50,000 ಮತಗಳ ಅಂತರದ ಮುನ್ನಡೆ ದಾಖಲಿಸಿದ್ದಾರೆ.
ಇನ್ನು ತಮಿಳುನಾಡಿನ ಈರೋಡ್ ಉಪಚುನಾವಣೆಯಲ್ಲಿ ಡಿಎಂಕೆ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
Advertisement