
ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ನೈಋತ್ಯ ದಿಲ್ಲಿಯ ಪಿಲ್ಲಂಜಿ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿರುವ ಬಗ್ಗೆ ಫೆಬ್ರವರಿ 6 ರಂದು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಪೊಲೀಸರು ಮಾಹಿತಿ ಪಡೆದಿದೆ. ತದನಂತರ ಪೊಲೀಸ್ ತಂಡ, ಆಸ್ಪತ್ರೆಗೆ ತೆರಳಿ ವೈದ್ಯಕೀಯ ದಾಖಲೆಗಳನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದರು.
ಆರಂಭದಲ್ಲಿ ಹುಡುಗಿ ತಾನು ಒಂದು ವರ್ಷದಿಂದ ಹುಡುಗನೊಬ್ಬನೊಂದಿಗೆ ಒಪ್ಪಿಗೆಯ ಸಂಬಂಧ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಹೆಚ್ಚಿನ ವಿಚಾರಣೆಯ ನಂತರ ಆಕೆಯ ಪಕ್ಕದ ಮನೆಯಲ್ಲಿದ್ದವರು ನಾಲ್ಕು ತಿಂಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆತ ತನ್ನ ಕೋಣೆಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಬಹಿರಂಗಪಡಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದರು.
ಅತ್ಯಾಚಾರದ ಘಟನೆಯನ್ನು ಯಾರಿಗಾದರೂ ಹೇಳಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದರಿಂದ ಭಯದಿಂದ ಆರಂಭದಲ್ಲಿ ವೈದ್ಯರಿಗೆ ಸಂತ್ರಸ್ತೆ ತಪ್ಪು ಮಾಹಿತಿ ನೀಡಿದ್ದರು. ಬಳಿಕ ಸತ್ಯಾಂಶ ಬಾಯ್ಬಿಟ್ಟಿದ್ದಾರೆ.
ಆಕೆಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಸರೋಜಿನಿನಗರ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
Advertisement