
ಫ್ರಾನ್ಸ್: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನ ವಿದೇಶಕ್ಕೆ ತೆರಳಲಿದ್ದಾರೆ. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಹ್ವಾನದ ಮೇರೆಗೆ ಫ್ರಾನ್ಸ್ ಗೆ ತೆರಳುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಎರಡು ದಿನ ಅಲ್ಲಿಯೇ ಇರಲಿದ್ದಾರೆ. ಫ್ರಾನ್ಸ್ ನಲ್ಲಿ AI ಶೃಂಗಸಭೆಯಲ್ಲಿ ಮೋದಿ ಫಾಲ್ಗೊಳ್ಳಲಿದ್ದಾರೆ. ಅಲ್ಲದೇ ಭಾರತ- ಫ್ರಾನ್ಸ್ ಸಂಬಂಧ ವೃದ್ಧಿ ಕುರಿತು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಮೋದಿ ಭೇಟಿಯು ಮ್ಯಾಕ್ರನ್ ಜೊತೆಗೆ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಗಾಗಿ 2047 ಹಾರಿಜಾನ್ ಮಾರ್ಗಸೂಚಿಯಲ್ಲಿ ಪ್ರಗತಿಯನ್ನು ಪರಿಶೀಲಿಸಲು ಅವಕಾಶ ನೀಡುತ್ತದೆ. ಫ್ರಾನ್ಸ್‌ನಲ್ಲಿ ಮೊದಲ ಭಾರತೀಯ ದೂತಾವಾಸವನ್ನು ಉದ್ಘಾಟಿಸಲು ಮೋದಿ ಅವರು ಫ್ರಾನ್ಸ್‌ನ ಐತಿಹಾಸಿಕ ನಗರವಾದ ಮಾರ್ಸೆಲ್ಲೆಗೆ ಭೇಟಿ ನೀಡಲಿದ್ದಾರೆ.
ಜಾಗತಿಕ ಒಳಿತಿಗಾಗಿ ಶಕ್ತಿಯನ್ನು ಬಳಸಿಕೊಳ್ಳಲು ಭಾರತ- ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳು ಸದಸ್ಯರಾಗಿರುವ ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮೊದಲ ಮತ್ತು ಎರಡನೆಯ ಮಹಾಯುದ್ಧಗಳಲ್ಲಿ ಮಜಾರ್ಗಸ್ ಯುದ್ಧದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಭಾರತೀಯ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಫ್ರಾನ್ಸ್‌ನಿಂದ ಎರಡು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಈ ಭೇಟಿ ಭಾರತ- ಅಮೆರಿಕ ಸ್ನೇಹ ಮತ್ತು ಹಲವು ಕ್ಷೇತ್ರಗಳಲ್ಲಿ ಒಪ್ಪಂದವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ.
Advertisement