ಪೋಷಕರ 'ಸೆಕ್ಸ್' ಕುರಿತಂತೆ 'ಕೊಳಕು' ಜೋಕ್‌ ಮಾಡಿ ಸಂಕಷ್ಟಕ್ಕೆ ಸಿಲುಕಿದ YouTuber ರಣವೀರ್ ಅಲ್ಲಾಬಾದಿಯಾ, Video!

ಅಲ್ಲಾಬಾದಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಫಡ್ನವೀಸ್ ಎಚ್ಚರಿಸಿದ್ದಾರೆ.
Ranveer Allahbadia-Narendra Modi
ರಣವೀರ್ ಅಲ್ಲಾಬಾದಿಯಾ-ನರೇಂದ್ರ ಮೋದಿTNIE
Updated on

ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ಕಾನೂನು ತೊಂದರೆಯಲ್ಲಿ ಸಿಲುಕಿರುವಂತೆ ತೋರುತ್ತಿದೆ. ಇತ್ತೀಚೆಗೆ, ಇಂಟರ್ನೆಟ್ ಕಾರ್ಯಕ್ರಮದ ಸಂದರ್ಭದಲ್ಲಿ ಪೋಷಕರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಲ್ಲದೆ, ಇನ್ನೂ ಇಬ್ಬರು ಜನರ ವಿರುದ್ಧ ದೂರು ದಾಖಲಾಗಿದೆ. ಇಲ್ಲಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಠಿಣ ಕ್ರಮ ಕೈಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಕೂಡ ಈ ಹೇಳಿಕೆಗೆ ಆಕ್ಷೇಪಣೆ ದಾಖಲಿಸಿದೆ.

ಅಲ್ಲಾಬಾದಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಫಡ್ನವೀಸ್ ಎಚ್ಚರಿಸಿದ್ದಾರೆ. 'ಮಿತಿ ಮೀರಿದರೆ ಕ್ರಮ ಕೈಗೊಳ್ಳಲಾಗುವುದು... ವಾಕ್ ಸ್ವಾತಂತ್ರ್ಯವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ' ಎಂದು ಅವರು ಹೇಳಿದರು. ಅಲ್ಲಾಬಾದಿಯಾ ಜೊತೆಗೆ, ಸಾಮಾಜಿಕ ಮಾಧ್ಯಮ ಪ್ರಭಾವಿ ಅಪೂರ್ವ ಮಖಿಜಾ ಮತ್ತು ಹಾಸ್ಯನಟ ಸಮಯ್ ರೈನಾ ವಿರುದ್ಧ ಮುಂಬೈ ಪೊಲೀಸ್ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಿಯರ್ ಬೈಸೆಪ್ಸ್ ಸೇರಿದಂತೆ ಹಲವಾರು ಯೂಟ್ಯೂಬ್ ಚಾನೆಲ್‌ಗಳನ್ನು ನಡೆಸುತ್ತಿರುವ ಅಲ್ಲಾಬಾಡಿಯಾ, ರೈನಾ ನಡೆಸಿಕೊಡುವ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಪೋಷಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. 'ನಿನ್ನ ಹೆತ್ತವರು ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತೀಯಾ ಅಥವಾ ಒಮ್ಮೆ ಅದರಲ್ಲಿ ಭಾಗವಹಿಸಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀಯಾ?' ಎಂದು ರಣವೀರ್ ಅಲ್ಲಾಬಾಡಿಯಾ ಸ್ಪರ್ಧಿಗೆ ಕೇಳಿದ್ದನು. ಅಲ್ಲದೆ ಈ ಕಾರ್ಯಕ್ರಮದಲ್ಲಿ ತಮ್ಮ ಖಾಸಗಿ ಭಾಗದ ಉದ್ದ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಜೋಕ್‌ ಮಾಡಿದರು.

Ranveer Allahbadia-Narendra Modi
ಪೋಷಕರ ಲೈಂಗಿಕತೆಯ ಬಗ್ಗೆ ಅಸಹ್ಯಕರ ಹೇಳಿಕೆ: ವ್ಯಾಪಕ ಟೀಕೆಗಳ ಬಗ್ಗೆ beer biceps ಖ್ಯಾತಿಯ Ranveer ಹೇಳಿದ್ದೇನು?

ಈ ಕುರಿತು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೆಟ್, 'ಇದು ಸೃಜನಶೀಲವಲ್ಲ. ಇದು ಪ್ರಚೋದನೆ. ಮತ್ತು ನಾವು ಈ ರೀತಿಯ ನಡವಳಿಕೆಯನ್ನು ಕೂಲ್ ಮತ್ತು ಸಾಮಾನ್ಯ ಎಂದು ಕರೆಯಲು ಸಾಧ್ಯವಿಲ್ಲ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಈ ಅಶ್ಲೀಲ ಹೇಳಿಕೆಗೆ ಭಾರಿ ಚಪ್ಪಾಳೆ ತಟ್ಟಿದ್ದು ಕಂಡುಬಂದಿತು. ಈ ಬಗ್ಗೆ ನಾವು ಚಿಂತಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com