
ನವದೆಹಲಿ: ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ JEE-Main 2025ರ ಮೊದಲ ಆವೃತ್ತಿಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ ಕುಶಾಗ್ರ ಗುಪ್ತಾ ಸೇರಿದಂತೆ ದೇಶಾದ್ಯಂತ 14 ಅಭ್ಯರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NIA) ಮಂಗಳವಾರ ಫಲಿತಾಂಶ ಪ್ರಕಟಿಸಿದ್ದು, ನೂರಕ್ಕೆ ನೂರು ಅಂಕ ಗಳಿಸಿದವರಲ್ಲಿ ಐವರು ರಾಜಸ್ಥಾನದವರು, ಒಬ್ಬರು ದೆಹಲಿ ಮತ್ತು ಉತ್ತರ ಪ್ರದೇಶದವರು, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್ , ತೆಲಂಗಾಣ, ಮಹಾರಾಷ್ಟ್ರದಿಂದ ತಲಾ ಒಬ್ಬರು ಇದ್ದಾರೆ.
14 ಅಭ್ಯರ್ಥಿಗಳಲ್ಲಿ 12 ಮಂದಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಉಳಿದ ಇಬ್ಬರು ಒಬಿಸಿ ಮತ್ತು ಎಸ್ ಸಿ ವರ್ಗಕ್ಕೆ ಸೇರಿದವರಾಗಿದ್ದಾರೆ. ಮೊದಲ ಆವೃತ್ತಿಯಲ್ಲಿ 12. 58 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಅಸ್ಸಾಮಿ, ಬೆಂಗಾಳಿ, ಇಂಗ್ಲೀಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ತೆಲುಗು, ತಮಿಳು, ಉರ್ದು ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡನೇ ಆವೃತ್ತಿ ಪರೀಕ್ಷೆ ಏಪ್ರಿಲ್ ನಲ್ಲಿ ನಿಗದಿಯಾಗಿದೆ. ಎರಡೂ ಆವೃತ್ತಿಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಆಧರಿಸಿ ಅಭ್ಯರ್ಥಿಗಳ Rank ಪ್ರಕಟಿಸಲಾಗುತ್ತದೆ.
Advertisement