ಮಹಾ ಕುಂಭಮೇಳ: ಅಂಬಾನಿಯ ನಾಲ್ಕು ತಲೆಮಾರು ಸಂಗಮದಲ್ಲಿ ಪವಿತ್ರ ಸ್ನಾನ

ಕುಂಭಮೇಳ ಭೇಟಿ ವೇಳೆ ಅಂಬಾನಿ ಅವರ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿತ್ತು.
ಅಂಬಾನಿ ಕುಟುಂಬ ಪವಿತ್ರ ಸ್ನಾನ
ಅಂಬಾನಿ ಕುಟುಂಬ ಪವಿತ್ರ ಸ್ನಾನ
Updated on

ಪ್ರಯಾಗ್‌ರಾಜ್‌: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ಉದ್ಯಮಿ ಮುಖೇಶ್ ಅಂಬಾನಿ ಅವರು ತಮ್ಮ ಕುಟುಂಬದೊಂದಿಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ.

ಇಂದು ಮಧ್ಯಾಹ್ನ ಪ್ರಯಾಗ್‌ರಾಜ್‌ ಭೇಟಿ ನೀಡಿದ ಮುಖೇಶ್ ಅಂಬಾನಿ, ಅವರ ತಾಯಿ ಕೋಕಿಲಾಬೆನ್ ಅಂಬಾನಿ, ಪುತ್ರರಾದ ಅನಂತ್ ಮತ್ತು ಆಕಾಶ್ ಅಂಬಾನಿ, ಆಕಾಶ್ ಅವರ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪೃಥ್ವಿ ಮತ್ತು ವೇದಾ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅಂಬಾನಿ ಕುಟುಂಬವು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರ ಸಮ್ಮುಖದಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿತು.

ಕುಂಭಮೇಳ ಭೇಟಿ ವೇಳೆ ಅಂಬಾನಿ ಅವರ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿತ್ತು.

ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬ ನಮ್ಮ ಆಶ್ರಮಕ್ಕೆ ಭೇಟಿ ನೀಡಿದ್ದು, ಸ್ವಾಮಿ ಚಿದಾನಂದ ಸರಸ್ವತಿ ಅವರ ನೇತೃತ್ವದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿತ್ತು ಎಂದು ಆಶ್ರಮ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಬಾನಿ ಕುಟುಂಬ ಪವಿತ್ರ ಸ್ನಾನ
ಕುಂಭಮೇಳ: ಸಂಗಮದಲ್ಲಿ ಅಮಿತ್ ಶಾ ಪವಿತ್ರ ಸ್ನಾನ, ಮೊಮ್ಮಗನಿಗೆ ಸಾಧುಗಳ ಆಶೀರ್ವಾದ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com