ವೇಗದ ಬೆಳವಣಿಗೆ, ಖಾಸಗಿ ಹೂಡಿಕೆ ಉತ್ತೇಜನ ಬಜೆಟ್‌ನ ಗುರಿ: ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ವೇಗದ ಬೆಳವಣಿಗೆ, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸುವುದು ಮತ್ತು ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸುವುದು ಕೇಂದ್ರ ಬಜೆಟ್ 2025-26 ರ ಗುರಿಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಾಮಾನ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಅಂದಾಜು ಅಥವಾ ಮುನ್ಸೂಚನೆಗಳನ್ನು ಮೀರಿ ಗಂಭೀರ ಬಾಹ್ಯ ಸವಾಲುಗಳೊಂದಿಗೆ ಸವಾಲಿನ ಸಮಯದಲ್ಲಿ ಬಜೆಟ್ ಸಿದ್ಧಪಡಿಸಲಾಗಿದೆ. ಇದರ ಹೊರತಾಗಿಯೂ ಭಾರತದ ಹಿತಾಸಕ್ತಿಗಳನ್ನು ಮುಖ್ಯವಾಗಿಟ್ಟುಕೊಂಡು ಮೌಲ್ಯಮಾಪನವನ್ನು ಸಾಧ್ಯವಾದಷ್ಟು ನಿಖರವಾಗಿ ಇರಿಸಲು ಪ್ರಯತ್ನಿಸಿದೆ ಎಂದು ಹೇಳಿದರು.

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ಒತ್ತಿ ಹೇಳಿದರು.

ರಾಷ್ಟ್ರೀಯ ಅಂಕಿಅಂಶ ಕಚೇರಿ (NSO)ಯ ಮೊದಲ ಮುಂಗಡ ಅಂದಾಜಿನ ಪ್ರಕಾರ ಭಾರತದ ಆರ್ಥಿಕತೆಯ ಬೆಳವಣಿಗೆ ನೈಜ ಪರಿಭಾಷೆಯಲ್ಲಿ ಶೇ. 6.4 ರಷ್ಟು ಮತ್ತು ನಾಮಮಾತ್ರದಲ್ಲಿ ಶೇ. 9.7 ರಷ್ಟು ಇರಲಿದೆ. ಆದ್ದರಿಂದ ಬಜೆಟ್‌ಗಾಗಿ ನಮ್ಮ ಗುರಿಗಳನ್ನು ಇಟ್ಟುಕೊಂಡಿದ್ದೇವೆ. ಅಂದರೆ ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸಲು, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸಲು, ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
'ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ': ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ, ಭಾರತ "ದುರ್ಬಲವಾದ ಐದು" ಆರ್ಥಿಕತೆಗಳಲ್ಲಿ ಒಂದಾಗಿತ್ತು ಎಂದು ನೆನಪಿಸಿಕೊಂಡ ಸಚಿವರು, COVID ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಆರ್ಥಿಕತೆಯನ್ನು ಉತ್ತಮವಾಗಿ ಮುನ್ನಡೆಸಿದ್ದು, ದೇಶವು ವಿಶ್ವದ ಐದನೇ ಅತಿದೊಡ್ಡ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com