
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬೊಲೆರೊ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯವರು ಮಹಾ ಕುಂಭಕ್ಕೆ ಹೋಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ಬೊಲೆರೊ ಹೆದ್ದಾರಿಯಲ್ಲಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿವೇಕ್ ಚಂದ್ರ ಯಾದವ್ ಹೇಳಿದ್ದಾರೆ.
ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 10 ಜನರು ಅಪಘಾತದಲ್ಲಿ ಮೃತಪಟ್ಟಿದ್ದು, ಬಸ್ ನಲ್ಲಿದ್ದ 19 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಡಿಸಿಪಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. "ಪ್ರಯಾಗರಾಜ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶ ಸಿಎಂ ಸಂತಾಪ ಸೂಚಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
Advertisement