ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಕೇಂದ್ರ ಸಚಿವ ಕಿರಣ್ ರಿಜಿಜು

ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುವುದು, ಅಧಿಕಾರಗಳು ಮತ್ತು ಕಾರ್ಯಗಳನ್ನು ಬಹಳ ಸ್ಪಷ್ಟವಾಗಿ ಗುರುತಿಸಲಾಗುವುದು ಎಂದು ಪ್ರಧಾನಿ ಮತ್ತು ಗೃಹ ಸಚಿವರು ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದಾರೆ
Kiren Rijiju
ಕಿರಣ್ ರಿಜಿಜು
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. ಆದಾಗ್ಯೂ, ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಮರು ಸ್ಥಾಪನೆಯ ದಿನಾಂಕವನ್ನು ನಿಗದಿಪಡಿಸಲು ನಿರಾಕರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುವುದು, ಅಧಿಕಾರಗಳು ಮತ್ತು ಕಾರ್ಯಗಳನ್ನು ಬಹಳ ಸ್ಪಷ್ಟವಾಗಿ ಗುರುತಿಸಲಾಗುವುದು ಎಂದು ಪ್ರಧಾನಿ ಮತ್ತು ಗೃಹ ಸಚಿವರು ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದರು.

ತಮ್ಮ ಭೇಟಿಯು ಕೇಂದ್ರ ಬಜೆಟ್‌ಗೆ ಸೀಮಿತವಾಗಿರುವುದರಿಂದ ಈ ಸಮಯದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಚುನಾಯಿತ ಮುಖ್ಯಮಂತ್ರಿಗಳ ನಡುವಿನ ಅಧಿಕಾರಗಳ ವಿಭಜನೆಯ ಸಮಯದ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ

ಆದ್ದರಿಂದ, ರಾಜಕೀಯ ಮತ್ತು ಆಡಳಿತದ ಕಡೆ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಈ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿದೆ ಎಂದು ನಾನು ಹೇಳಬಲ್ಲೆ. ಲೆಫ್ಟಿನೆಂಟ್ ಗವರ್ನರ್ ಕೇಂದ್ರಾಡಳಿತ ಪ್ರದೇಶದ ಆಡಳಿತ ಮುಖ್ಯಸ್ಥರಾಗಿದ್ದರೂ ಸರ್ಕಾರವನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ಆಯ್ಕೆಯಾದ ಅತ್ಯಂತ ಯಶಸ್ವಿ ಸರ್ಕಾರವನ್ನು ಹೊಂದಿದ್ದೇವೆ ಎಂದು ಅವರು ಹೇಳಿದರು.

ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರು ವಕ್ಫ್ ಮಸೂದೆಯನ್ನು ಬೆಂಬಲಿಸುತ್ತಾರೆಯೇ ಎಂಬ ಪ್ರಶ್ನೆಗೆ ಸಕಾರಾತ್ಮಕವಾಗಿ ಉತ್ತರಿಸಿದ ಸಚಿವರು, ಹಲವಾರು ಮುಸ್ಲಿಂ ಸಂಸದರು ಸಹ ಖಾಸಗಿಯಾಗಿ ಅದನ್ನು ಬೆಂಬಲಿಸಿದ್ದಾರೆ ಹಲವಾರು ಮುಸ್ಲಿಂ ಸಂಸದರು (ಮಸೂದೆಗೆ) ಬೆಂಬಲ ವ್ಯಕ್ತಪಡಿಸಿದ್ದಾರೆ ಮತ್ತು ಮಹಿಳೆಯರು ಸೇರಿದಂತೆ ಸಾವಿರಾರು ಮುಸ್ಲಿಮರು ಇದನ್ನು ಸ್ವಾಗತಿಸಿದ್ದಾರೆ ಎಂದು ರಿಜಿಜು ಹೇಳಿದರು.

Kiren Rijiju
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುತ್ತೇವೆ: ಶ್ರೀನಗರದಲ್ಲಿ ಪ್ರಧಾನಿ ಮೋದಿ ಭರವಸೆ

2025-26ರ ಆರ್ಥಿಕ ವರ್ಷದಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಜೆಟ್ ಹಂಚಿಕೆಯಲ್ಲಿ ಇಳಿಕೆ ಕುರಿತು ಪ್ರತಿಕ್ರಿಯಿಸಿದ ರಿಜಿಜು, ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರಾಡಳಿತ ಪ್ರದೇಶದ ಖರ್ಚು ಸಾಮರ್ಥ್ಯದ ಪ್ರಕಾರ ಹಣ ಮೀಸಲಿಡಲಾಗಿದೆ.

ಆಯವ್ಯಯ ಹಂಚಿಕೆಗಳು ಕೇಂದ್ರಾಡಳಿತ ಪ್ರದೇಶದ ಸ್ಥಿತಿಗೆ ಅನುಗುಣವಾಗಿರುತ್ತವೆ. ವೆಚ್ಚ ಮಾಡುವ ಸಾಮರ್ಥ್ಯಕ್ಕೆ ಅನುಗುಣವಾಗಿ ಹಂಚಿಕೆಯಾಗಿದೆ ಎಂದು ಹಣಕಾಸು ಸಚಿವರು ಸ್ಪಷ್ಟಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ತೋಟಗಾರಿಕೆ ರೈತರು ಮತ್ತು ಕರಕುಶಲ ಕುಶಲಕರ್ಮಿಗಳಿಗೆ ಬಜೆಟ್‌ನಲ್ಲಿ ನೆರವು ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com