ನಾಗ್ಪುರ: ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು

ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸುತ್ತಮುತ್ತಲಿನ ದಟ್ಟಕಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು.
Casual Images
ಸಾಂದರ್ಭಿಕ ಚಿತ್ರ
Updated on: 

ನಾಗ್ಫುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಭಾನುವಾರ ಸ್ಫೋಟಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕಟೋಲ್ ತಹಸಿಲ್‌ನ ಕೊತ್ವಾಲ್‌ಬುಡಿಯಲ್ಲಿರುವ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಮಧ್ಯಾಹ್ನ 1:30 ಕ್ಕೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸುತ್ತಮುತ್ತಲಿನ ದಟ್ಟಕಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು. ತದನಂತರ ಬೆಂಕಿಯನ್ನು ನಿಯಂತ್ರಿಸಲಾಗಿದೆ.

Casual Images
ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 9 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಸ್ಫೋಟ ಹೇಗೆ ಸಂಭವಿಸಿತು. ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com