ಉತ್ತರ ಪ್ರದೇಶ: ಬಸ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ನಾಲ್ವರ ಸಾವು, 6 ಮಂದಿಗೆ ಗಾಯ

ಛತ್ತೀಸ್‌ಗಢದಿಂದ ಬರುತ್ತಿದ್ದ ಬಸ್‌ ಮತ್ತು ಮಹಾರಾಷ್ಟ್ರದಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್‌ ಎರಡೂ ಅಯೋಧ್ಯೆಯತ್ತ ಹೊರಟಿದ್ದವು.
tempo-traveller
ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್
Updated on: 

ಲಖನೌ:ಟೆಂಪೋ ಟ್ರಾವೆಲರ್ ಒಂದು ಹಿಂದಿನಿಂದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಆರು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ನಡೆದಿದೆ.

ಛತ್ತೀಸ್‌ಗಢದಿಂದ ಬರುತ್ತಿದ್ದ ಬಸ್‌ ಮತ್ತು ಮಹಾರಾಷ್ಟ್ರದಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್‌ ಎರಡೂ ಅಯೋಧ್ಯೆಯತ್ತ ಹೊರಟಿದ್ದವು. ಮೃತರು ಮತ್ತು ಗಾಯಗೊಂಡವರೆಲ್ಲರೂ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಕಟ್ಟರ್ ಬಳಸಿ ಟೆಂಪೋ ಟ್ರಾವೆಲರ್‌ನಲ್ಲಿ ಸಿಲುಕಿದವರನ್ನು ಹೊರತೆಗೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

tempo-traveller
ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಭೀಕರ ಅಪಘಾತ: 10 ಮಂದಿ ಮಹಾಕುಂಭ ಭಕ್ತರ ಸಾವು

ಗಾಯಾಳುಗಳ ಪೈಕಿ ಇಬ್ಬರನ್ನು ಲಖನೌದಾ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದ್ದು, ನಾಲ್ವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಟೆಂಪೋ ಟ್ರಾವೆಲರ್‌ನ ಚಾಲಕ ನಿದ್ರೆಯ ಮಂಪರಿನಲ್ಲಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com