
ಕೊಚ್ಚಿ: ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ಯೂಟ್ಯೂಬರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಇಲ್ಲಿನ ಕಲಮಸ್ಸೇರಿ ಪೊಲೀಸರು ಶನಿವಾರ ಕೋಯಿಕ್ಕೋಡ್‌ನಿಂದ ಮೊಹಮ್ಮದ್ ನಿಶಾಲ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ದೂರಿನ ಪ್ರಕಾರ, ಮಹಿಳೆಯ ಆಕ್ಷೇಪಾರ್ಹ ವಿಡಿಯೋಗಳು ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ ಯೂಟ್ಯೂಬರ್, ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ.
ಆ ವಿಡಿಯೋಗಳು ಮತ್ತು ಫೋಟೊಗಳನ್ನು ಸಂತ್ರಸ್ತೆಯ ಪತಿಗೂ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಯೂಟ್ಯೂಬರ್‌ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Advertisement