5-6 ತಿಂಗಳಲ್ಲಿ ಮಹಿಳೆಯರಿಗೆ ಕ್ಯಾನ್ಸರ್ ಲಸಿಕೆ ಲಭ್ಯ: ಕೇಂದ್ರ ಸಚಿವ

ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಮತ್ತು ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.
Cancer Vaccine (file pic)
ಕ್ಯಾನ್ಸರ್ ಲಸಿಕೆ (ಸಾಂಕೇತಿಕ ಚಿತ್ರ)online desk
Updated on

ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಮತ್ತು ಒಂಬತ್ತು ರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರತಾಪರಾವ್ ಜಾಧವ್ ಅವರು ಮಂಗಳವಾರ ತಿಳಿಸಿದ್ದಾರೆ.

ಇಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಇಲಾಖೆ ರಾಜ್ಯ ಸಚಿವರು, ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ ಮತ್ತು ಪ್ರಯೋಗಗಳು ನಡೆಯುತ್ತಿವೆ ಎಂದು ಹೇಳಿದರು.

"ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಮತ್ತು ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.

Cancer Vaccine (file pic)
Union Budget 2025: ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು ಮತ್ತು ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು" ಎಂದು ಜಾಧವ್ ತಿಳಿಸಿದರು.

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com