
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಅನಾಮಧೇಯ ಕರೆಗಳು ಮತ್ತು ಇಮೇಲ್‌ಗಳು ಮುಂಬೈ ಪೊಲೀಸರಿಗೆ ಗುರುವಾರ ಬೆಳಗ್ಗೆ ಬಂದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಗೋರೆಗಾಂವ್, ಜೆ ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕರೆ ಮಾಡಿದವರು ಡಿಸಿಎಂ ಶಿಂಧೆ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಹೇಳಿದರು.
ಬೆದರಿಕೆ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.
Advertisement