ಏಳು ದಿನಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಒಪ್ಪಿಸಿ, ಇಲ್ಲದಿದ್ದರೆ ಕ್ರಮ ಎದುರಿಸಿ: ಮಣಿಪುರ ರಾಜ್ಯಪಾಲ ಎಚ್ಚರಿಕೆ

ಏಳು ದಿನಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ.
ಅಜಯ್ ಕುಮಾರ್ ಭಲ್ಲಾ
ಅಜಯ್ ಕುಮಾರ್ ಭಲ್ಲಾ
Updated on

ಇಂಫಾಲ್: ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಏಳು ದಿನಗಳ ಒಳಗೆ ಸ್ವಯಂಪ್ರೇರಿತವಾಗಿ ಸರ್ಕಾರಕ್ಕೆ ಒಪ್ಪಿಸುವಂತೆ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಗುರುವಾರ ರಾಜ್ಯದ ಜನರಿಗೆ ಕೇಳಿಕೊಂಡಿದ್ದಾರೆ.

ಏಳು ದಿನಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ.

ಆದಾಗ್ಯೂ, ಏಳು ದಿನಗಳ ಅವಧಿ ಮುಗಿದ ನಂತರ ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸದಿದ್ದರೆ "ಕಠಿಣ ಕ್ರಮ" ಕೈಗೊಳ್ಳಲಾಗುವುದು ಎಂದು ಭಲ್ಲಾ ಎಚ್ಚರಿಸಿದ್ದಾರೆ.

"ಶಾಂತಿ ಮತ್ತು ಕೋಮು ಸಾಮರಸ್ಯದ ಮೇಲೆ ಪರಿಣಾಮ ಬೀರುವ ದುರದೃಷ್ಟಕರ ಘಟನೆಗಳಿಂದ ಕಣಿವೆ ಮತ್ತು ಬೆಟ್ಟಗಳಲ್ಲಿರುವ ಮಣಿಪುರದ ಜನ ಕಳೆದ 20 ತಿಂಗಳಿಗೂ ಹೆಚ್ಚು ಕಾಲ ಅಪಾರ ಕಷ್ಟಗಳನ್ನು ಅನುಭವಿಸಿದ್ದಾರೆ" ಎಂದು ರಾಜ್ಯಪಾಲರು ಗುರುವಾರ ಹೊರಡಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಜನರು ತಮ್ಮ ಸಾಮಾನ್ಯ ದೈನಂದಿನ ಚಟುವಟಿಕೆಗಳಿಗೆ ಮರಳಲು ಸಾಧ್ಯವಾಗುವಂತೆ ರಾಜ್ಯದ ಎಲ್ಲಾ ಸಮುದಾಯಗಳು ತಮ್ಮ ಹೋರಾಟವನ್ನು ನಿಲ್ಲಿಸಬೇಕು ಮತ್ತು ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮುಂದೆ ಬರಬೇಕು ಎಂದು ಅವರು ಹೇಳಿದ್ದಾರೆ.

ಅಜಯ್ ಕುಮಾರ್ ಭಲ್ಲಾ
ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ

"ಈ ನಿಟ್ಟಿನಲ್ಲಿ ಎಲ್ಲಾ ಸಮುದಾಯಗಳ ಜನರು, ವಿಶೇಷವಾಗಿ ಕಣಿವೆ ಮತ್ತು ಬೆಟ್ಟಗಳಲ್ಲಿರುವ ಯುವಕರು, ಸ್ವಯಂಪ್ರೇರಣೆಯಿಂದ ಮುಂದೆ ಬಂದು ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಇಂದಿನಿಂದ ಜಾರಿಗೆ ಬರುವಂತೆ ಹತ್ತಿರದ ಪೊಲೀಸ್ ಠಾಣೆ/ಹೊರಠಾಣೆ/ಭದ್ರತಾ ಪಡೆಗಳ ಶಿಬಿರಕ್ಕೆ ಒಪ್ಪಿಸುವಂತೆ ನಾನು ಪ್ರಾಮಾಣಿಕವಾಗಿ ವಿನಂತಿಸುತ್ತೇನೆ" ಎಂದು ಭಲ್ಲಾ ಹೇಳಿದ್ದಾರೆ.

ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಈ ಒಂದೇ ಒಂದು ಕ್ರಮವು ಪ್ರಬಲವಾದ ಸೂಚನೆಯಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

"ನಿಗದಿತ ಸಮಯದೊಳಗೆ ಅಂತಹ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಿದರೆ ಯಾವುದೇ ದಂಡನಾತ್ಮಕ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಆದರೆ ಏಳು ದಿನಗಳ ನಂತರವೂ ಅಂತಹ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ರಾಜ್ಯಪಾಲರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com