
ನವದೆಹಲಿ: ದೆಹಲಿಯಲ್ಲಿ ಹೊಸದಾಗಿ ರಚನೆಯಾದ ಬಿಜೆಪಿ ಸರ್ಕಾರವು ತನ್ನ ಚುನಾವಣಾ ಭರವಸೆಗಳನ್ನು ಹಂತಹಂತವಾಗಿ ಈಡೇರಿಸಲಿದೆ. ಮುಂಬರುವ ದಿನಗಳಲ್ಲಿ ವಿವಿಧ ಕಲ್ಯಾಣ ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದು ಬಿಜೆಪಿ ನಾಯಕ ಮೋಹನ್ ಸಿಂಗ್ ಬಿಶ್ಟ್ ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದ ಅವರು, ದೆಹಲಿಯ ಅಭಿವೃದ್ಧಿಯ ಹೊಸ ಉಪಕ್ರಮವು ಮುಂಬರುವ ದಿನಗಳಲ್ಲಿ ಪ್ರಾರಂಭವಾಗಲಿದೆ. ಸ್ವಲ್ಪ ಸಮಯ ತೆಗೆದುಕೊಳ್ಳಬಹುದು, ಆದರೆ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವುದನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದರು. ಯಮುನಾ ನದಿ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಈಗಾಗಲೇ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ ಎಂದರು.
ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವರು ಯಮುನಾ ನದಿಗೆ ಭೇಟಿ ಪರಿಶೀಲಿಸಬೇಕು, ಅಲ್ಲಿ ಯಂತ್ರಗಳನ್ನು ಸ್ಥಾಪಿಸಲಾಗಿದೆಯೇ ಎಂದು ನೋಡಬೇಕು. ಬಿಜೆಪಿ ಸರ್ಕಾರ ಬಂದ ನಂತರ ಯಮುನಾ ನದಿ ನೀರು ಕೊಳಕಾಗಿರಲು ನಾವು ಬಿಡುವುದಿಲ್ಲ ಎಂದರು.
ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಅವರ ಸಂಭಾವ್ಯ ನೇಮಕಾತಿಯ ಕುರಿತು ಊಹಾಪೋಹಗಳಿಗೆ ನನಗೆ ಗೊತ್ತಿಲ್ಲ ಪಕ್ಷವು ನನಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ ಎಂದರು.
ನಿನ್ನೆ ಗುರುವಾರ ಮುಂಜಾನೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿ ನಾಯಕಿ ರೇಖಾ ಗುಪ್ತಾ ಅವರು ತಮ್ಮ ಸಂಪುಟದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಎರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. 5 ಲಕ್ಷ ರೂಪಾಯಿಗಳ ಆರೋಗ್ಯ ನೆರವು ನೀಡುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವುದು ಮತ್ತು ದೆಹಲಿ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಬಾಕಿ ಇರುವ 14 ಸಿಎಜಿ ವರದಿಗಳನ್ನು ಮಂಡಿಸುವುದಾಗಿದೆ.
Advertisement