ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಗುರುವಾರ ಬೆಳಿಗ್ಗೆ 8.30ಕ್ಕೆ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದಾಗಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅವರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಸದ್ಯ ಅವರು ಆರೋಗ್ಯವಾಗಿದ್ದಾರೆ. ಶುಕ್ರವಾರ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
2024ರ ಡಿಸೆಂಬರ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಅವರಿಗೆ 78 ವರ್ಷ ತುಂಬಿತ್ತು. ಅವರನ್ನು ವೈದ್ಯರ ತಂಡವು ಗಮನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
Advertisement