
ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣ ಹರಿದು ಬರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತರಲು ಸಾಧ್ಯವಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಮ್ಮ ಸರ್ಕಾರ ಆರು ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತಂದಿರುವುದಕ್ಕೆ ಹೆಮ್ಮೆಪಡಬೇಕು. ಇದು ಎಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆಗಳ್ನು ತೋರಿಸುತ್ತದೆ ಎಂದರು.
ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಯೋಜಿಸಿರುವ ಉತ್ತರ ಪ್ರದೇಶ ಸರ್ಕಾರದ ಸಾಮರ್ಥ್ಯವನ್ನು ದೇಶ, ವಿದೇಶ ನೋಡುತ್ತಿದೆ. ಮಹಾಕುಂಭ ಉತ್ತರ ಪ್ರದೇಶದ ಆರ್ಥಿಕತೆಯಲ್ಲಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಬೆಳವಣಿಗೆಯನ್ನು ತರಲಿದೆ ಎಂದರು.
ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಒತ್ತಿ ಹೇಳಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಶೇ. 20 ರಷ್ಟು ಮಹಿಳೆಯರ ನೇಮಕಾತಿ ನಡೆಯುತ್ತಿದೆ.ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ. 2029ರೊಳಗೆ ದೇಶದ ಅತಿದೊಡ್ಡ ಆರ್ಥಿಕತೆಯ ರಾಜ್ಯವಾಗಿ ಹೊರಹೊಮ್ಮುವ ದಾರಿಯಲಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದರು.
Advertisement