
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರು, ಆಡಳಿತಾರೂಢ ಭಾರತೀಯ ಜನತಾ ಪಕ್ಷ ವಿಧಾನಸಭೆ ಚುನಾವಣೆ ವೇಳೆ ಭರವಸೆ ನೀಡಿದ್ದ ಮಹಿಳೆಯರಿಗೆ ಮಾಸಿಕ 2,500 ರೂ.ಗಳ ನೆರವಿನ ಬಗ್ಗೆ ಚರ್ಚಿಸಲು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಪಾಯಿಂಟ್ಮೆಂಟ್ ಕೇಳಿದ್ದಾರೆ.
ಶನಿವಾರ ಗುಪ್ತಾ ಅವರಿಗೆ ಬರೆದ ಪತ್ರದಲ್ಲಿ, ಪ್ರಧಾನಿ ಚುನಾವಣಾ ರ್ಯಾಲಿಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವಿನ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಆರ್ಥಿಕ ನೆರವಿನ ಯೋಜನೆಗೆ ಅನುಮೋದನೆ ಏಕೆ ನೀಡಿಲ್ಲ ಎಂದು ಅತಿಶಿ ಪ್ರಶ್ನಿಸಿದ್ದಾರೆ.
ತಿಂಗಳ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ವಿರುದ್ಧ ಬಿಜೆಪಿ ಭರ್ಜರಿ ಜಯಗಳಿಸಿದ ನಂತರ ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರು.
ಹಿಂದಿನ ಎಎಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಅತಿಶಿ, ಫೆಬ್ರವರಿ 23 ರಂದು ತಮ್ಮ ಪಕ್ಷದ ಶಾಸಕರೊಂದಿಗೆ ಸಿಎಂ ರೇಖಾ ಗುಪ್ತಾ ಅವರನ್ನು ಭೇಟಿ ಮಾಡಲು ಅಪಾಯಿಂಟ್ಮೆಂಟ್ ಕೋರಿದ್ದಾರೆ.
"ಜನವರಿ 31 ರಂದು ದ್ವಾರಕಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ತಾಯಂದಿರು ಮತ್ತು ಸಹೋದರಿಯರಿಗೆ ಬಿಜೆಪಿ ಸರ್ಕಾರ ರಚಿಸಿದ ನಂತರ ಮೊದಲ ಸಂಪುಟ ಸಭೆಯಲ್ಲಿ ಮಾಸಿಕ 2,500 ರೂ.ಗಳ ನೀಡುವ ಯೋಜನೆ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದ್ದರು."
Advertisement