
ಬಿಹಾರ: ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದಾಗ ಜೀಪ್- ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 4 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮುಗಿಸಿ ಹಿಂತಿರುಗುತ್ತಿದ್ದ ಭಕ್ತರಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಚಿಲ್ಬಿಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಜಮುಯಿ ಕಡೆಗೆ ಹೋಗುತ್ತಿದ್ದ ಜೀಪ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಪ್ರದೀಪ್ ಕುಮಾರ್, ಮೊಹಾನಿಯಾ (ಕೈಮೂರ್) ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದು, ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Advertisement