
ಚೆನ್ನೈ: ತಮಿಳುನಾಡಿನ ಕೃಷ್ಣಾಪುರಂನ 10ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನೊಬ್ಬ ಚಾಕುವಿನಿಂದ ಕತ್ತು ಸೀಳಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
15 ವರ್ಷದ ಬಾಲಕಿ Instagram ಮೂಲಕ ಅದೇ ಪ್ರದೇಶದ 12ನೇ ತರಗತಿ ಓದುತ್ತಿರುವ 17 ವರ್ಷದ ಬಾಲಕನೊಂದಿಗೆ ಸಂಪರ್ಕ ಸಾಧಿಸಿದ್ದಳು. ಫೆಬ್ರವರಿ 23ರ ರಾತ್ರಿ, ಆ ಹುಡುಗ ರಾತ್ರಿ 10 ಗಂಟೆ ಸುಮಾರಿಗೆ ಬಾಲಕಿಯನ್ನು ಮನೆಯಿಂದ ಹೊರಗೆ ಕರೆದಿದ್ದಾನೆ. ಹೊರಗೆ ಬಂದಾಗ ಆಕೆಯ ಮೇಲೆ ಚಾಕುವಿನಿಂದ ದಾಳಿ ಮಾಡಿ ಅವಳ ಕತ್ತು ಸೀಳಿ ನಂತರ ಆಕೆಯ ಕತ್ತಿನಲ್ಲಿದ್ದ 12 ಗ್ರಾಂ ಚಿನ್ನದ ಸರವನ್ನು ದೋಚಿದನು.
ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದ ಬಾಲಕಿ ಮನೆಗೆ ಹೋಗಿದ್ದಾಳೆ. ಮಗಳ ಸ್ಥಿತಿಯನ್ನು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದು ಕೂಡಲೇ ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆಕೆಯ ತಂದೆಯ ದೂರಿನ ಮೇರೆಗೆ, ಬಾಲವಿದುತ್ತಿ ಪೊಲೀಸರು ಪ್ರಕರಣ ದಾಖಲಿಸಿ ಹುಡುಗನನ್ನು ಬಂಧಿಸಿದ್ದಾರೆ. ಆತನ ಮೂವರು ಸ್ನೇಹಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕರೂರ್ ಪೊಲೀಸರ ಪ್ರಕಾರ, ಹುಡುಗಿ ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಳೆ ಎಂಬ ಆರೋಪದ ಮೇಲೆ ಹುಡುಗನ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಧಿಕೃತ ಹೇಳಿಕೆಯಲ್ಲಿ, ಪೊಲೀಸರು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ನಿರಾಕರಿಸಿದ್ದಾರೆ. ಸಾಮೂಹಿಕ ಅತ್ಯಾಚಾರದ ವರದಿಗಳನ್ನು ಕೆಲವು ಮಾಧ್ಯಮಗಳು ಹರಡುತ್ತಿರುವ "ಸುಳ್ಳು ಸುದ್ದಿ" ಎಂದು ಹೇಳಿದ್ದಾರೆ. ಸದ್ಯ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement