
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಏಪ್ರಿಲ್ 3-4 ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ (ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ) ಶೃಂಗಸಭೆಯ ಹೊರಗೆ ಭೇಟಿ ಮಾಡುವ ಸಾಧ್ಯತೆಯಿದೆ.
ಉಪ-ಪ್ರಾದೇಶಿಕ ಗುಂಪಿನ ಪ್ರಮುಖ ಶೃಂಗಸಭೆಯ ದಿನ ಏಪ್ರಿಲ್ 4 ಆಗಿರುತ್ತದೆ. ಪ್ರಧಾನಿ ಮೋದಿ ಮತ್ತು ಮುಹಮ್ಮದ್ ಯೂನಸ್ ನಡುವಿನ ಮಾತುಕತೆಯ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದ್ದು, ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಕಳೆದ ವರ್ಷ ಸೆಪ್ಟೆಂಬರ್ 3-4 ರಂದು ನಿಗದಿಯಾಗಿದ್ದ ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿಯವರು ಏಪ್ರಿಲ್ ಆರಂಭದಲ್ಲಿ ಥೈಲ್ಯಾಂಡ್‌ಗೆ ಪ್ರಯಾಣಿಸಲಿದ್ದಾರೆ, ಥೈಲ್ಯಾಂಡ್ ದೇಶದಲ್ಲಿನ ರಾಜಕೀಯ ಬೆಳವಣಿಗೆಗಳಿಂದಾಗಿ ಇದು ಮುಂದೂಡಲ್ಪಟ್ಟಿತು.
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಸಾರ್ಕ್ ಹೆಚ್ಚು ನಿಷ್ಕ್ರಿಯಗೊಂಡ ನಂತರ, ಭಾರತವು ಬಿಮ್‌ಸ್ಟೆಕ್ ನ್ನು ಮಾದರಿ ಪ್ರಾದೇಶಿಕ ಸಂಘಟನೆಯಾಗಿ ನೋಡುತ್ತಿದೆ. ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆದುಹಾಕಿದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳು ಹದಗೆಟ್ಟಿದೆ. ಮಸ್ಕತ್‌ನಲ್ಲಿ ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೇನ್ ಅವರನ್ನು ಭೇಟಿಯಾದ ಕೆಲವೇ ದಿನಗಳ ನಂತರ ಭಾನುವಾರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್, ಭಾರತದ ಬಗ್ಗೆ ಮಧ್ಯಂತರ ಆಡಳಿತದ ಪ್ರತಿಕೂಲ ಧೋರಣೆ ಮತ್ತು ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಬಾಂಗ್ಲಾದೇಶ ಸರ್ಕಾರ ಭಾರತದ ಬಗ್ಗೆ ಮಾಡಿದ ಸಾರ್ವಜನಿಕ ಟೀಕೆಗೆ ಜೈಶಂಕರ್ ಪ್ರತಿಕ್ರಿಯಿಸುತ್ತಾ, ಮಧ್ಯಂತರ ಸರ್ಕಾರದ ಅಧಿಕಾರಿಗಳು ತಮ್ಮ ಎಲ್ಲಾ ಸಮಸ್ಯೆಗಳಿಗೆ ಭಾರತವನ್ನು ದೂಷಿಸುತ್ತಿದ್ದರೆ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಆಧಾರರಹಿತವಾಗಿದ್ದರೆ, ಅದು ಸಂಘರ್ಷದ ಸಂದೇಶವನ್ನು ರವಾನಿಸುತ್ತದೆ.
ಬಿಮ್‌ಸ್ಟೆಕ್ ಮಾದರಿ ಪ್ರಾದೇಶಿಕ ಗುಂಪು
ಬಿಮ್‌ಸ್ಟೆಕ್ ಏಳು ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ: ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಥೈಲ್ಯಾಂಡ್, ಭೂತಾನ್ ಮತ್ತು ನೇಪಾಳ. ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಸಾರ್ಕ್ ನಿಷ್ಕ್ರಿಯಗೊಂಡ ನಂತರ, ಭಾರತ ಬಿಮ್‌ಸ್ಟೆಕ್ ನ್ನು ಮಾದರಿ ಪ್ರಾದೇಶಿಕ ಗುಂಪಾಗಿ ಹೆಚ್ಚು ಪ್ರಚಾರ ಮಾಡುತ್ತಿದೆ.
Advertisement