JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ.

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಭಾರತೀಯ ಬಂದರು ಮಸೂದೆಯ ಜೊತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.

ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಸಂಗ್ರಹ ಚಿತ್ರ
ವಕ್ಫ್ ಮಸೂದೆ ಕುರಿತ JPC ವರದಿ ರಾಜ್ಯಸಭೆಯಲ್ಲಿ ಮಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ, ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು. ಆದರೆ, ಕೇಂದ್ರವು ಈ ಆರೋಪವನ್ನು ನಿರಾಕರಿಸಿತು.

ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈ ಮೂಲಕ ಮಾರ್ಚ್ 10 ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಗುರಿ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ದರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com