
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಲ್ಲಿ ಸಿಎಂ ಅತಿಶಿ ವಿರುದ್ಧ ಅಲ್ಕಾ ಲಾಂಬಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದು, ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಹೆಸರನ್ನು ಘೋಷಿಸಲಾಗಿದೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷೆಯಾಗಿರುವ ಅಲ್ಕಾ ಲಾಂಬಾ ಅವರನ್ನು ಕಲ್ಕಾಜಿ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಕೇಂದ್ರ ಚುನಾವಣಾ ಸಮಿತಿ ಅನುಮೋದಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಹೇಳಿದೆ.
ಅಲ್ಕಾ ಲಾಂಬಾ ಈ ಹಿಂದೆ 2015ರಲ್ಲಿ ಚಾಂದಿನಿ ಚೌಕ ಕ್ಷೇತ್ರದಿಂದ AAP ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ ಸೆಪ್ಟೆಂಬರ್ 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 47 ಅಭ್ಯರ್ಥಿಗಳನ್ನೊಳಗೊಂಡ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. AAP ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Advertisement