
ಕೋಲ್ಕೋತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಪುತ್ರಿ ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಕೋಲ್ಕತ್ತಾದ ಡೈಮಂಡ್ ಹಾರ್ಬರ್ನ್ ನಲ್ಲಿ ನಡೆದಿದೆ.
ಕೋಲ್ಕತ್ತಾದಿಂದ ರಾಯಚಕ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಸ್ ಗುದ್ದಿಕೊಂಡು ಹೋಗಿದೆ. ಸನಾ ಅವರು ಕಾರು ಚಲಾಯಿಸುತ್ತಿರಲಿಲ್ಲ. ಬದಲಾಗಿ ಡ್ರೈವರ್ ಕಾರು ಚಲಾಯಿಸುತ್ತಿದ್ದರು. ಕೊನೆಗೆ ಕಾರು ಡ್ರೈವರ್, ಬಸ್ ಚೇಸ್ ಮಾಡಿ ಬಸ್ ನಿಲ್ಲಿಸಿದ್ದಾನೆ.
ಬಳಿಕ ಸನಾ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುರ್ಘಟನೆಯಲ್ಲಿ ಸನಾ ಗಂಗೂಲಿ ಕಾರಿಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವರಿಗೆ ಯಾವುದೇ ಗಾಯವಾಗಿಲ್ಲ. ಆದರೆ ಅಪಘಾತ ವಿರುದ್ಧ ಸನಾ ಗಂಗೂಲಿ ಕೇಸ್ ದಾಖಲಿಸಿಲ್ಲ. ಆದರೆ ಭಯಗೊಂಡ ಬಸ್ ಚಾಲಕ ಪಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement