Pakistan ಕ್ಕೆ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿ: Afghanistan ವೈಮಾನಿಕ ದಾಳಿ ಬಗ್ಗೆ ಭಾರತ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.
randhir jaiswal- pakistan prime minister shehbaz sharif
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್- ಪಾಕ್ ಪ್ರಧಾನಿ ಶೆಹಬಾಜ್ ಷರೀಫ್online desk
Updated on

ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನಕ್ಕೆ ಅದರ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿಯಾಗಿಬಿಟ್ಟಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಟೀಕಿಸಿದೆ.

ಕೆಲವು ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಅಫ್ಘಾನಿಸ್ತಾನದ ಕೆಲವು ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಫ್ಘಾನ್ ನಾಗರಿಕರ ಮೇಲಿನ ವೈಮಾನಿಕ ದಾಳಿಯಲ್ಲಿ ಹಲವಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅಮಾಯಕ ನಾಗರಿಕರ ಮೇಲಿನ ಯಾವುದೇ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

randhir jaiswal- pakistan prime minister shehbaz sharif
ಅಫ್ಘಾನಿಸ್ತಾನ ಮೇಲೆ ಪಾಕ್ ವೈಮಾನಿಕ ದಾಳಿ; ಮಕ್ಕಳು ಸೇರಿ 46 ಮಂದಿ ಬಲಿ

"ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸವಾಗಿದೆ. ಈ ನಿಟ್ಟಿನಲ್ಲಿ ಅಫ್ಘಾನ್ ವಕ್ತಾರರ ಪ್ರತಿಕ್ರಿಯೆಯನ್ನು ನಾವು ಗಮನಿಸಿದ್ದೇವೆ" ಎಂದು ಇದೇ ವೇಳೆ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com