HMPV: ಕಣ್ಗಾವಲು ಹೆಚ್ಚಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ.
ting on human metapneumovirus (HMPV) in Mumbai
ಹೊಸ ವೈರಸ್ ಬಗ್ಗೆ ಕಲಾವಿದರೊಬ್ಬರಿಂದ ಜಾಗೃತಿ ಮೂಡಿಸುವ ಪ್ರಯತ್ನ
Updated on

ನವದೆಹಲಿ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ವಿರುದ್ಧ ತಡೆಗಟ್ಟುವ ಕ್ರಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿಯನ್ನು ಬಲಪಡಿಸಲು ರಾಜ್ಯಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಮತ್ತು ತೀವ್ರ ಉಸಿರಾಟದ ಸೋಂಕಿನ ಬಗ್ಗೆ (SARI) ಕಣ್ಗಾವಲು ಬಲಪಡಿಸಲು ಸಲಹೆ ನೀಡಲಾಗಿದೆ.

ಜನರಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾ ದೇಶದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರು ಇತ್ತೀಚೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಡೆಸಿದ ವರ್ಚುವಲ್ ಸಭೆ ನಂತರ ಈ ನಿರ್ದೇಶನವನ್ನು ನೀಡಲಾಗಿದೆ.

ಸಭೆಯಲ್ಲಿ, ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ. 2001 ರಿಂದ ಜಾಗತಿಕವಾಗಿ ಪ್ರಸ್ತುತವಾಗಿರುವ ಹೆಚ್ ಎಂಪಿವಿಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಒತ್ತಿ ಹೇಳಿದರು. ILI/SARI ಕಣ್ಗಾವಲು ಬಲಪಡಿಸಲು ಮತ್ತು ಪರಿಶೀಲಿಸಲು ರಾಜ್ಯಗಳಿಗೆ ಸಲಹೆ ನೀಡಿದರು. ಉಸಿರಾಟದ ಕಾಯಿಲೆಗಳ ಹೆಚ್ಚಳವು ಸಾಮಾನ್ಯವಾಗಿ ಚಳಿಗಾಲದ ತಿಂಗಳುಗಳಲ್ಲಿ ಕಂಡುಬರುತ್ತದೆ ಎಂದು ಪುನರುಚ್ಚರಿಸಿದ ಸಚಿವಾಲಯವು ಉಸಿರಾಟದ ಸಂಬಂಧಿ ಕಾಯಿಲೆ ಪ್ರಕರಣಗಳಲ್ಲಿ ಯಾವುದೇ ಸಂಭಾವ್ಯ ಉಲ್ಬಣಕ್ಕೆ ದೇಶವು ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದೆ.

ting on human metapneumovirus (HMPV) in Mumbai
HMPV Advisory: ದೇಶದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಕೊಟ್ಟ ಮುನ್ನೆಚ್ಚರಿಕೆ ಏನು?

ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಅನೇಕ ಉಸಿರಾಟದ ವೈರಸ್‌ಗಳಲ್ಲಿ ಒಂದಾಗಿದೆ, ಇದು ಎಲ್ಲಾ ವಯಸ್ಸಿನ ಜನರಲ್ಲಿ ವಿಶೇಷವಾಗಿ ಚಳಿಗಾಲದಲ್ಲಿ ಮತ್ತು ವಸಂತಕಾಲದ ಆರಂಭದಲ್ಲಿ ಸೋಂಕನ್ನು ಉಂಟುಮಾಡುತ್ತದೆ. ವೈರಸ್ ಸೋಂಕು ಸಾಮಾನ್ಯವಾಗಿ ಸೌಮ್ಯವಾದ ಮತ್ತು ಸ್ವಯಂ-ಸೀಮಿತಗೊಳಿಸುವ ಸ್ಥಿತಿಯಾಗಿದೆ.

ಮುತುವರ್ಜಿ ಹೇಗೆ?: ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ಕೈಗಳನ್ನು ತೊಳೆಯುವಂತಹ ಸರಳ ಕ್ರಮಗಳೊಂದಿಗೆ ವೈರಸ್ ಹರಡುವುದನ್ನು ತಡೆಗಟ್ಟುವ ಬಗ್ಗೆ ಜನಸಂಖ್ಯೆಯಲ್ಲಿ ಜಾಗೃತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಯಿತು. ಕೈ ತೊಳೆಯದೆ ಕಣ್ಣು, ಬಾಯಿ, ಮೂಗು ಮುಟ್ಟಬೇಡಿ, ರೋಗದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ; ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com