ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

86 ವಯಸ್ಸಿನ ಅಸಾರಾಂ ಅವರು ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ವಿವಿಧ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Asaram Bapu
ಅಸಾರಾಂ ಬಾಪು
Updated on

ನವದೆಹಲಿ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರಿಗೆ ಮಾರ್ಚ್ 31 ರವರೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.

ವೈದ್ಯಕೀಯ ಕಾರಣಗಳಿಗಾಗಿ ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ನ್ಯಾಯ ಪೀಠ ಈ ಜಾಮೀನು ನೀಡಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ ಅವರ ಅನುಯಾಯಿಗಳನ್ನು ಭೇಟಿ ಮಾಡದಂತೆ ನಿರ್ದೇಶಿಸಿದೆ.

86 ವಯಸ್ಸಿನ ಅಸಾರಾಂ ಅವರು ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ವಿವಿಧ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2023 ರಲ್ಲಿ ಗಾಂಧಿನಗರ ನ್ಯಾಯಾಲಯವು ತನಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಸಾರಾಂ ಮಾಡಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು.

ವೈದ್ಯಕೀಯ ಆಧಾರದ ಮೇಲೆ ಮಾತ್ರ ಈ ವಿಚಾರವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು. ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಸಾರಾಂ ಮಾಡಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಆಗಸ್ಟ್ 29, 2024 ರಂದು ತಿರಸ್ಕರಿಸಿತ್ತು.

Asaram Bapu
ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ ಸೈಟ್ ರದ್ದುಗೊಳಿಸಿದ ಬಿಡಿಎ

ವೈದ್ಯಕೀಯ ಆಧಾರದ ಮೇಲೆ ಮಾತ್ರ ಈ ವಿಚಾರವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು. ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಸಾರಾಂ ಮಾಡಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಆಗಸ್ಟ್ 29, 2024 ರಂದು ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com