ದೆಹಲಿ ಪೊಲೀಸರು (ಸಂಗ್ರಹ ಚಿತ್ರ)
ದೇಶ
ದೆಹಲಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ: 12 ನೇ ತರಗತಿಯ ವಿದ್ಯಾರ್ಥಿ ಬಂಧನ
ಅಪ್ರಾಪ್ತ ವಯಸ್ಸಿನ 12ನೇ ತರಗತಿ ಬಾಲಕನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಗುರುವಾರ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದವು.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಆರೋಪದಲ್ಲಿ 12ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಅಪ್ರಾಪ್ತ ವಯಸ್ಸಿನ 12ನೇ ತರಗತಿ ಬಾಲಕನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಗುರುವಾರ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದವು. ಕಳೆದ ವರ್ಷವೂ ಹೀಗೆ ಹಲವು ಬಾರಿ ಬೆದರಿಕೆಗಳು ಬಂದಿದ್ದವು. ಆದರೆ ಅವೆಲ್ಲವೂ ಹುಸಿ ಬೆದರಿಕೆಗಳಾಗಿದ್ದವು.
ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಿರುವರು. ಬಾಂಬ್ ಬೆದರಿಕೆಗಳು ಶಾಲಾ ಅಧಿಕಾರಿಗಳಲ್ಲಿ ಭೀತಿಯನ್ನು ಉಂಟು ಮಾಡಿತ್ತು.
ದೆಹಲಿ ಪೊಲೀಸರು ಈ ವಾರ ಇಂತಹ ಬಿಕ್ಕಟ್ಟುಗಳನ್ನು ಎದುರಿಸಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ