
ಲೂಧಿಯಾನ (ಪಂಜಾಬ್): ಗುಂಡೇಟು ತಗುಲಿ ಲೂಧಿಯಾನ ಪಶ್ಚಿಮ ಜಿಲ್ಲೆಯ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಶಾಸಕರ ತಲೆಗೆ ಗುಂಡೇಟು ಬಿದ್ದಿದ್ದು, ಬಳಿಕ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಜಿಲ್ಲಾ ಎಎಪಿ ಅಧ್ಯಕ್ಷ ಶರಣ್ಪಾಲ್ ಸಿಂಗ್ ಮಕ್ಕರ್ ಹಾಗೂ ಪೊಲೀಸ್ ಆಯುಕ್ತ ಕುಲದೀಪ್ ಸಿಂಗ್ ಚಾಹಲ್ ಸಾವನ್ನು ದೃಢಪಡಿಸಿದ್ದಾರೆ.
ಗುರುಪ್ರೀತ್ ಗೋಗಿಗೆ ಗುಂಡು ತಗುಲಿದ ಸುದ್ದಿ ತಿಳಿದ ತಕ್ಷಣ ಪೊಲೀಸ್ ಆಯುಕ್ತರು ಕೂಡಾ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಶಾಸಕರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದವರ ಹೇಳುತ್ತಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ಗುರುಪ್ರೀತ್ ಗೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆಯೋ ಎಂಬುದು ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement