ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ

ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.
Ten Naxalites were killed in an encounter with security personnel in Chhattisgarh's Sukma district on Friday.
ಸಾಂದರ್ಭಿಕ ಚಿತ್ರ
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆ ನಡೆಸಿದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಜಿಲ್ಲಾ ಪಡೆಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದರು.

ಕಾರ್ಯಾಚರಣೆಯಲ್ಲಿ 'ಸಮವಸ್ತ್ರ' ಧರಿಸಿದ್ದ ಮೂವರು ನಕ್ಸಲರ ಮೃತದೇಹಗಳೊಂದಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಇಲ್ಲಿಯವರೆಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 12 ನಕ್ಸಲರ ಹತ್ಯೆಯಾಗಿದೆ.

Ten Naxalites were killed in an encounter with security personnel in Chhattisgarh's Sukma district on Friday.
ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್​ಕೌಂಟರ್: ಮೂವರು ನಕ್ಸಲರ ಹತ್ಯೆ

ಜನವರಿ 6 ರಂದು ನಾರಾಯಣಪುರ-ದಂತೇವಾಡ-ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಮೂರು ದಿನಗಳ ಸುದೀರ್ಘ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಹತರಾಗಿದ್ದಾರೆ. ಇದೇ ದಿನ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಐಇಡಿಯೊಂದಿಗೆ ವಾಹನವನ್ನು ಸ್ಫೋಟಿಸಿದರು. ಈ ವೇಳೆ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದರು.

ಜನವರಿ 9 ರಂದು ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ.

ಇದಕ್ಕೂ ಮುನ್ನ ಜನವರಿ 3 ರಂದು ರಾಯ್‌ಪುರ ವಿಭಾಗದಲ್ಲಿ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರೊಬ್ಬರು ಹತರಾಗಿದ್ದರು.

ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com