ಕಾಸರಗೋಡು: ಗಂಟಲಲ್ಲಿ ಪಿಸ್ತಾ ಸಿಪ್ಪೆ ಸಿಲುಕಿ 2 ವರ್ಷದ ಬಾಲಕನ ದಾರುಣ ಸಾವು

ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು ಎಂದು ತಿಳಿದುಬಂದಿದೆ.
ಮೃತ ಮಗು
ಮೃತ ಮಗು
Updated on

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ

ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದರು.

ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು ಎಂದು ತಿಳಿದುಬಂದಿದೆ.

ಆದರೆ, ಭಾನುವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಬಾಕಿಯುಳಿದಿದ್ದ ಪಿಸ್ತಾದ ಸಿಪ್ಪೆ ಶ್ವಾಸಕೋಶದಲ್ಲಿ ಉಳಿದಿದ್ದರಿಂದಾಗಿ ಮಗು ಉಸಿರಾಟದ ಸಮಸ್ಯೆಗೆ ತುತ್ತಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ವಿದೇಶದಲ್ಲಿರುವ ಮಗುವಿನ ತಂದೆ ಅನ್ವರ್ ಅವರು ಕಳೆದ ವಾರವಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಮತ್ತೆ ವಿದೇಶಕ್ಕೆ ತೆರಳಿದ್ದರು.

ಮೃತ ಮಗು
ಕೊಪ್ಪಳ: ಗರ್ಭದಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಕೊನೆಯುಸಿರು!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com