ಸಾಂದರ್ಭಿಕ ಚಿತ್ರ
ದೇಶ
ಮಹಾರಾಷ್ಟ್ರ: 900 ಮೆಟ್ಟಿಲುಗಳನ್ನು ಹತ್ತಿ, ಇಳಿಯುವಾಗ 25 ವರ್ಷದ ಯುವಕ ಸಾವು!
ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.
ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ತಲಸಾರಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿದ 25 ವರ್ಷದ ಯುವಕನೊಬ್ಬ ಇಳಿಯುವಾಗ ಸಾವನ್ನಪ್ಪಿದ್ದಾರೆ.
ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣ ಆತನನ್ನು ಕಾಸಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಆತನ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಮಿಲನ್ ಗೆ ಹೃದಯಾಘಾತವಾಗಿರಬಹುದು ಎಂದು ಕುಟುಂಬ ಸದಸ್ಯರು ಶಂಕಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಹೇಮಂತ್ ಬೆಹೆರೆ ಅವರು, ಮರಣೋತ್ತರ ಪರೀಕ್ಷಾ ವರದಿ ಲಭ್ಯವಾದ ನಂತರವೇ ಸಾವಿಗೆ ಕಾರಣವನ್ನು ಖಚಿತಪಡಿಸಿಕೊಳ್ಳಬಹುದು ಎಂದಿದ್ದಾರೆ.
ಮಹಾರಾಷ್ಟ್ರದ ಜನಪ್ರಿಯ ಯಾತ್ರಾ ಸ್ಥಳವಾದ ಈ ದೇವಸ್ಥಾನಕ್ಕೆ ಮಂಗಳವಾರ, ಶುಕ್ರವಾರ ಮತ್ತು ವಾರಾಂತ್ಯದಲ್ಲಿ ಭಾರಿ ಜನಸಂದಣಿ ಇರುತ್ತದೆ.