ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್ ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ

ಫೆಬ್ರವರಿ 5 ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.
Arvind Kejriwal
ಅರವಿಂದ್ ಕೇಜ್ರಿವಾಲ್PTI
Updated on

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ, ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ(ಎಂಎಚ್‌ಎ) ಇತ್ತೀಚೆಗೆ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅಗತ್ಯವಾದ ಅನುಮತಿಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Arvind Kejriwal
ಬಿಜೆಪಿ ಮತದಾರರ ಪಟ್ಟಿಯನ್ನು ತಿರುಚಿದೆ: ಕೇಜ್ರಿವಾಲ್ ಗಂಭೀರ ಆರೋಪ; ಚುನಾವಣಾ ಆಯೋಗಕ್ಕೆ ದೂರು

ಫೆಬ್ರವರಿ 5 ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಮಾಜಿ ಮುಖ್ಯಮಂತ್ರಿಯನ್ನು ದೆಹಲಿ ಅಬಕಾರಿ "ಹಗರಣ"ದ "ಪ್ರಮುಖ ಆರೋಪಿ ಮತ್ತು ಪ್ರಮುಖ ಸಂಚುಕೋರ" ಎಂದು ಇಡಿ ಕರೆದಿದೆ.

ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಇಡಿ ಪೂರ್ವಾನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ನವೆಂಬರ್ ನಲ್ಲಿ ನೀಡಿದ ಆದೇಶದಲ್ಲಿ ಹೇಳಿತ್ತು. ಇದರ ಬೆನ್ನಲ್ಲೇ ಡಿಸೆಂಬರ್ 5ರಂದು ಜಾರಿ ನಿರ್ದೇಶನಾಲಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ಕೇಜ್ರಿವಾಲ್ ಹಗರಣದ ಪ್ರಮುಖ ಸಂಚುಕೋರ ಆಗಿರುವುದರಿಂದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಳಿಕೊಂಡಿತ್ತು. ಇದಕ್ಕೆ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯವು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com