Saif Ali Khan ಗೆ ಚಾಕು ಇರಿತ ಪ್ರಕರಣ; ಸಿಸಿಟಿವಿಯಲ್ಲಿ ಆರೋಪಿ ಪತ್ತೆ, ಫೋಟೋ ಬಹಿರಂಗ

ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ.
Actor Saif Ali Khan's Attacker Seen On CCTV
ಸೈಫ್ ಅಲಿಖಾನ್ ಮನೆಗೆ ನುಗ್ಗಿದ್ದ ದುಷ್ಕರ್ಮಿ
Updated on

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಮುಂಬೈ ಪೊಲೀಸರು ಗುರುತಿಸಿದ್ದು, ಈ ಪೈಕಿ ಓರ್ವನ ಫೋಟೋ ಕೂಡ ಲಭ್ಯವಾಗಿದೆ.

ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದ್ದು, ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿಖಾನ್ ಮನೆಯ ಮೆಟ್ಟಿಲುಗಳಿಂದ ಇಳಿಯುವಾಗ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಯ ಚಲನವಲನ ಪತ್ತೆಯಾಗಿದೆ.

ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ತೀವ್ರಗೊಳಿಸಿದ್ದು, ತನಿಖೆಗಾಗಿ 10 ವಿಶೇಷ ತಂಡ ರಚನೆ ಮಾಡಿದ್ದಾರೆ. ಇದೀಗ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಅಪಾರ್ಟ್​ಮೆಂಟ್​ಗೆ ನುಗ್ಗಿದ್ದರು. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Actor Saif Ali Khan's Attacker Seen On CCTV
ಪತ್ನಿ-ಮಕ್ಕಳ ರಕ್ಷಣೆಗೆ ಹೋದಾಗ ನಟ ಸೈಫ್ ಮೇಲೆ ಹಲ್ಲೆ; ತಂದೆ ಆರೋಗ್ಯ ವಿಚಾರಿಸಿದ ಇಬ್ರಾಹಿಂ, ಸಾರಾ

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು. ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ಇರಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು.

ಇದೀಗ ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಬೆನ್ನಿನಲ್ಲಿ ಇದ್ದ ಚಾಕು ಹೊರತೆಗೆಯಲಾಗಿದೆ. ಅಂತೆಯೇ ಅವರ ಎಡಗೈ ಮತ್ತು ಕುತ್ತಿಗೆ ಭಾಗಕ್ಕೆ ಪ್ಲಾಸ್ಟಿಕ್ ಸರ್ಜರಿ ತಂಡವರು ಚಿಕಿತ್ಸೆ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com