Maharashtra CM Devendra Fadnavis
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿಗಳು ಕೂಡ ಸೇಫ್ ಇಲ್ಲ, ಇನ್ನು ಸಾಮಾನ್ಯ ಜನರ ಗತಿ ಏನು: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ವಾಗ್ದಾಳಿ

ಮಹಾರಾಷ್ಟ್ರ ಸರ್ಕಾರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಸಾಮಾನ್ಯ ಜನರು ಇರಲಿ, ತಮ್ಮದೇ ಆದ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳು ಸಹ ಸುರಕ್ಷಿತವಾಗಿಲ್ಲ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.
Published on

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈಯ ಬಾಂದ್ರಾದಲ್ಲಿರುವ ನಿವಾಸದಲ್ಲಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೆಲೆಬ್ರಿಟಿಗಳು ಮತ್ತು ಗಣ್ಯರೂ ಸಹ ಸುರಕ್ಷಿತವಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಘಟನೆ ಬಗ್ಗೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ವಿರೋಧ ಪಕ್ಷಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದೆ.

ಮಹಾರಾಷ್ಟ್ರ ಸರ್ಕಾರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಸಾಮಾನ್ಯ ಜನರು ಇರಲಿ, ತಮ್ಮದೇ ಆದ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳು ಸಹ ಸುರಕ್ಷಿತವಾಗಿಲ್ಲ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ನಟ ಸೈಫ್ ಆಲಿ ಖಾನ್ ಪದ್ಮಶ್ರೀ ಪುರಸ್ಕೃತರಾಗಿದ್ದು, ಇತ್ತೀಚೆಗೆ ರಾಜ್ ಕಪೂರ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಕುಟುಂಬದೊಂದಿಗೆ ಭೇಟಿ ಮಾಡಿದ್ದರು.

ರಾಜ್ಯದಲ್ಲಿ ಪೊಲೀಸರನ್ನು ಹೆಚ್ಚಾಗಿ ರಾಜಕಾರಣಿಗಳ ವಿಶೇಷವಾಗಿ ಪಕ್ಷಾಂತರ ಮಾಡುವವರ ಭದ್ರತೆಗಾಗಿ ನಿಯೋಜಿಸಲಾಗಿದೆ. ಕಾನೂನಿನ ಭಯ ಯಾರಿಗೂ ಇಲ್ಲ ಎಂಬುದು ಈ ಘಟನೆ ತೋರಿಸಿಕೊಟ್ಟಿದೆ ಎಂದಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಟ್ಟಿದೆ. ಇಂಧನ ಸಂಸ್ಥೆಯಿಂದ ಹಣ ಸುಲಿಗೆ ಮಾಡುವ ಪ್ರಯತ್ನವನ್ನು ವಿಫಲಗೊಳಿಸಿದ್ದಕ್ಕಾಗಿ ಗ್ರಾಮದ ಸರಪಂಚರೊಬ್ಬರನ್ನು ಕ್ರೂರವಾಗಿ ಕೊಲ್ಲಲಾಯಿತು. ಆಡಳಿತವು ಸಮಾಜ ವಿರೋಧಿ ಶಕ್ತಿಗಳಿಗಾಗಿ ಕೆಲಸ ಮಾಡುತ್ತಿದೆಯೇ ಎಂಬ ಸಂದೇಹ ಉಂಟಾಗಿದೆ.

ಮುಂಬೈಯ ಅತಿ ಭದ್ರತೆ ಇರುವ ವಲಯದಲ್ಲಿ ವಾಸಿಸುವ ನಟರಾದ ಸೈಫ್ ಅಲಿ ಖಾನ್ ಮತ್ತು ಸಲ್ಮಾನ್ ಖಾನ್ ಅವರಂತಹ ಜನರ ಮೇಲೆ ದಾಳಿ ನಡೆಯುತ್ತಿದ್ದು, ಅವರ ಮನೆಗಳಿಗೆ ಬುಲ್ಲೆಟ್ ಪ್ರೂಫ್ ವಿಂಡೋಗಳನ್ನು ಅಳವಡಿಸುವ ಅಗತ್ಯ ಬೀಳುತ್ತದೆ ಎಂದಾದರೆ ಸರ್ಕಾರವನ್ನು ಯಾರೂ ನಂಬುವುದಿಲ್ಲ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಾರೆ.

Maharashtra CM Devendra Fadnavis
ಸೈಫ್ ಆಲಿ ಖಾನ್ ಮೇಲೆ ಆರು ಬಾರಿ ಚಾಕು ಇರಿತ, ತೋಳು, ಬೆನ್ನಿಗೆ ಆಳವಾದ ಗಾಯ: ಪತ್ನಿ ಕರೀನಾ ಟೀಂ ಹೇಳಿಕೆ; ಪೊಲೀಸರಿಂದ ತನಿಖೆ ತೀವ್ರ

ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಬಾಂದ್ರಾ ಫ್ಲಾಟ್‌ನ ಬಾಲ್ಕನಿಯಲ್ಲಿ ಗುಂಡು ನಿರೋಧಕ ಗಾಜಿನ ಫಲಕವನ್ನು ಅಳವಡಿಸಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಸದಸ್ಯರು ಕಳೆದ ಏಪ್ರಿಲ್‌ನಲ್ಲಿ ಸಲ್ಮಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು.

ಇಂತಹ ಸೆಲೆಬ್ರಿಟಿಗಳು, ಗಣ್ಯರೇ ಸುರಕ್ಷಿತವಾಗಿಲ್ಲದಿದ್ದರೆ, ಸಾಮಾನ್ಯ ಜನರ ಗತಿ ಏನು ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರ ತವರು ಪಟ್ಟಣವೂ ಕಳೆದ ಹತ್ತು ದಿನಗಳಲ್ಲಿ ಅನೇಕ ಕೊಲೆಗಳು ಮತ್ತು ಅತ್ಯಾಚಾರಗಳಿಗೆ ಸಾಕ್ಷಿಯಾಗಿದೆ ಎಂದು ಅವರು ನಾಗ್ಪುರ ಘಟನೆ ಉಲ್ಲೇಖಿಸಿ ಹೇಳಿದ್ದರು.

ಮುಖ್ಯಮಂತ್ರಿ ಫಡ್ನವೀಸ್ ಗೃಹ ಖಾತೆಯನ್ನು ಕೂಡ ಹೊಂದಿದ್ದಾರೆ. ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಫಡ್ನವೀಸ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದನ್ನು ಇದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಲೋಂಧೆ ಹೇಳಿದರು.

ಎನ್‌ಸಿಪಿ (ಎಸ್‌ಪಿ) ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ ಖಾನ್ ಮೇಲಿನ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು, ಈ ಘಟನೆಯನ್ನು ಆತಂಕಕಾರಿ ಎಂದು ಕರೆದಿದ್ದಾರೆ. ಸೈಫ್ ಅಲಿ ಖಾನ್ ಅವರಂತಹ ಖ್ಯಾತನಾಮರ ಮೇಲಿನ ದಾಳಿ ತುಂಬಾ ದುರದೃಷ್ಟಕರ. ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್‌ಸಿಪಿ (ಎಸ್‌ಪಿ)ಯ ಮತ್ತೊಬ್ಬ ನಾಯಕ ಮತ್ತು ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಕಲಾವಿದರಿಗೆ ಭಯ ಮುಕ್ತ ವಾತಾವರಣವನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

X

Advertisement

X
Kannada Prabha
www.kannadaprabha.com