ಚಿತ್ತೂರು: ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು, 22 ಮಂದಿಗೆ ಗಾಯ

ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್
Updated on

ತಿರುಪತಿ: ಚಿತ್ತೂರಿನ ಗಂಗಾಸಾಗರಂ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದು, ಸುಮಾರು 22 ಮಂದಿ ಗಾಯಗೊಂಡಿದ್ದಾರೆ.

ತಿರುಪತಿಯಿಂದ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಹೆದ್ದಾರಿ ನಿರ್ಮಾಣಕ್ಕೆ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಪಲ್ಟಿಯಾಗಿದೆ. ಬಸ್ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು.

ಘಟನೆ ಕುರಿತು ಮಾಹಿತಿ ತಿಳಿದ ಜಿಲ್ಲಾಧಿಕಾರಿ ಸುಮಿತ್ ಕುಮಾರ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಸಿಎಂಸಿ ವೆಲ್ಲೂರಿಗೆ ವರ್ಗಾಯಿಸಲಾಗಿದೆ.

ಸುಮಿತ್ ಕುಮಾರ್ ಮಾತನಾಡಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾರಿಗೆ ಸಚಿವ ಎಂ ರಾಮಪ್ರಸಾದ್ ರೆಡ್ಡಿ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಚಿತ್ತೂರು ಜಿಲ್ಲಾ ವೈದ್ಯಕೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್
ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷ ರೂಪಾಯಿ ನಗದು ರಹಿತ ಚಿಕಿತ್ಸೆ: ನಿತಿನ್ ಗಡ್ಕರಿ ಮಹತ್ವದ ಘೋಷಣೆ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com