
ದೇವರಿಯಾ: ಉತ್ತರ ಪ್ರದೇಶದ ದೇವರಿಯಾದಲ್ಲಿ 15 ವರ್ಷದ ಬಾಲಕನ ಮೇಲೆ ಆತನ ಇಬ್ಬರು ಸ್ನೇಹಿತರು ಅತ್ಯಾಚಾರ ಎಸಗಿದ್ದು, ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇಬ್ಬರು ಆರೋಪಿಗಳು 15 ಮತ್ತು 18 ವರ್ಷ ವಯಸ್ಸಿನವರಾಗಿದ್ದು, ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಅವರು ಹೇಳಿದ್ದಾರೆ.
ಜನವರಿ 3 ರಂದು ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಬಾಲಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದರು.
ಬಾಲಕನ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಬಾಲಕನ ಕುಟುಂಬ ಮಾತ್ರ ಆತನ ಮೇಲೆ ಮೂವರು ಸ್ನೇಹಿತರು ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಾಲಕನ ಕುಟುಂಬದ ಪ್ರಕಾರ, ಆರೋಪಿಯು ಈ ಹಿಂದೆಯೂ ಕೆಲಸ ಕೊಡಿಸುವ ಭರವಸೆ ನೀಡಿ ಮುಂಬೈಗೆ ಕರೆಸಿ ಅತ್ಯಾಚಾರ ಎಸಗಿದ್ದ. ಆರೋಪಿಯು ಬಾಲಕನಿಗೆ ಮದ್ಯ ನೀಡಿ ನಂತರ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
Advertisement