
ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಗೆ ಬ್ರಿಝಾ ಕಾರು ಡಿಕ್ಕಿ ಹೊಡೆದಿದ್ದು ಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಮೃತಪಟ್ಟಿದ್ದಾರೆ.
ಮೃತರನ್ನು ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟಿದ್ದಾರೆ. ಘಟನೆಯ ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.
ಎರಡು ದಿನಗಳ ಹಿಂದೆ ಮನು ಭಾಕರ್ ಅವರಿಗೆ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು. ಇದಾದ ನಂತರ, ಅವರ ಕುಟುಂಬಕ್ಕೆ ಬರಸಿಡಿಲು ಬಡಿದಿದೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮನೆ ಮಹೇಂದ್ರಗಢ ಬೈಪಾಸ್‌ನಲ್ಲಿದೆ.
ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡೂ ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತಿದ್ದರು. ಅವರು ಒಲಿಂಪಿಕ್ಸ್‌ನಲ್ಲಿ ಪ್ರದರ್ಶನ ನೀಡಿದ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.
Advertisement