ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಬಾಂಗ್ಲಾದೇಶದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ

ಆರೋಪಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಬಾಂದ್ರಾದ ರಜಾಕಾಲದ ಪೀಠದ ಮುಂದೆ ಹಾಜರುಪಡಿಸಲಾಯಿತು.
ಪ್ರಕರಣದ ಪ್ರಮುಖ ಆರೋಪಿ - ಸೈಫ್ ಅಲಿ ಖಾನ್
ಪ್ರಕರಣದ ಪ್ರಮುಖ ಆರೋಪಿ - ಸೈಫ್ ಅಲಿ ಖಾನ್
Updated on

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿಯನ್ನು ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಬಾಂದ್ರಾ ನ್ಯಾಯಾಲಯ ಭಾನುವಾರ ಆದೇಶಿಸಿದೆ.

ಆರೋಪಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಬಾಂದ್ರಾದ ರಜಾಕಾಲದ ಪೀಠದ ಮುಂದೆ ಹಾಜರುಪಡಿಸಲಾಯಿತು.

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತನಾಗಿರುವ ವ್ಯಕ್ತಿಯನ್ನು 30 ವರ್ಷದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್‌ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಅಕ್ರಮವಾಗಿ ದೇಶದೊಳಗೆ ನುಸುಳಿದ್ದ. ಭಾರತಕ್ಕೆ ಬಂದ ಬಳಿಕ ಬಿಜೋಯ್ ದಾಸ್ ಎಂದು ಹೆಸರು ಬದಲಿಸಿಕೊಂಡಿದ್ದ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಪೊಲೀಸ್ ಹೇಳಿಕೆಯ ಪ್ರಕಾರ, ಅಪರಾಧದ ತನಿಖೆಗಾಗಿ ವಿವಿಧ ತನಿಖಾ ತಂಡಗಳನ್ನು ರಚಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 311, 312, 331 (4), 331 (6), ಮತ್ತು 331 (7) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ನಿವಾಸಕ್ಕೆ ಪ್ರವೇಶಿಸಿದ್ದ. ಬುಧವಾರ ತಡರಾತ್ರಿ ಸೈಫ್ ಅವರ ನಿವಾಸಕ್ಕೆ ನುಗ್ಗಿದ್ದ ಆರೋಪಿಯು ಅವರ ಮೇಲೆ ಹಲ್ಲೆ ನಡೆಸಿದ್ದನು. ಈ ವೇಳೆ ಸೈಫ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿ - ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್ ಮೇಲೆ ದಾಳಿ: ಛತ್ತೀಸಗಢದ ದುರ್ಗ್‌ದಲ್ಲಿ ಬಂಧಿಸಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದ ಪೊಲೀಸರು

ಪೊಲೀಸರ ಪ್ರಕಾರ, ಆರೋಪಿಯು ತನ್ನ ಸ್ವಗ್ರಾಮಕ್ಕೆ ಪರಾರಿಯಾಗಲು ಹೊರಟಿದ್ದಾಗ ಥಾಣೆಯ ಹಿರಾನಂದನಿ ಎಸ್ಟೇಟ್‌ನಲ್ಲಿ ಬಂಧಿಸಲಾಯಿತು. ಆರೋಪಿ ಬಾಂಗ್ಲಾದೇಶದ ಜಲೋಕಾಟಿ ಜಿಲ್ಲೆಯವನು ಎಂದು ತಿಳಿದುಬಂದಿದೆ.

ಆಸ್ಪತ್ರೆ ಆಡಳಿತದ ಪ್ರಕಾರ, ಸೈಫ್ ಅಲಿ ಖಾನ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. 2.5 ಇಂಚು ಉದ್ದದ ಬ್ಲೇಡ್ ತುಂಡನ್ನು ಹೊರತೆಗೆಯುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಟ ಈಗ ಅಪಾಯದಿಂದ ಪಾರಾಗಿದ್ದಾರೆ, ವೈದ್ಯಕೀಯ ಸಿಬ್ಬಂದಿ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com