ಆರ್‌.ಜಿ ಕರ್ ತೀರ್ಪು ತೃಪ್ತಿ ತಂದಿಲ್ಲ, ಕೋಲ್ಕತ್ತಾ ಪೊಲೀಸರೇ ತನಿಖೆ ಮಾಡಿದ್ದರೆ ಗಲ್ಲು ಶಿಕ್ಷೆ ಖಚಿತ ಪಡಿಸಿಕೊಳ್ಳುತ್ತಿದ್ದೆವು: ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸುದ್ಗಿಗಾರರಿಗೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಪ್ರಶ್ನಿಸಿದರು.
ಮಮತಾ ಬ್ಯಾನರ್ಜಿ - ಸಂಜಯ್ ರಾಯ್
ಮಮತಾ ಬ್ಯಾನರ್ಜಿ - ಸಂಜಯ್ ರಾಯ್
Updated on

ಕೋಲ್ಕತ್ತಾ: ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಅಪರಾಧಿ ಸಂಜಯ್ ರಾಯ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದ ಬಗ್ಗೆ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸುದ್ಗಿಗಾರರಿಗೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಪ್ರಶ್ನಿಸಿದರು.

ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ "ಬಲವಂತವಾಗಿ" ಕಸಿದುಕೊಳ್ಳಲಾಯಿತು. ಒಂದು ವೇಳೆ ಕೋಲ್ಕತ್ತಾ ಪೊಲೀಸರೇ ತನಿಖೆ ನಡೆಸಿದ್ದರೆ, ಆರೋಪಿಗೆ ಮರಣದಂಡನೆಯನ್ನು ಖಚಿತಪಡಿಸಿಕೊಳ್ಳುತ್ತಿದ್ದರು ಎಂದು ಪ್ರತಿಪಾದಿಸಿದರು.

ಮಮತಾ ಬ್ಯಾನರ್ಜಿ - ಸಂಜಯ್ ರಾಯ್
ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ: ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ಪ್ರಕಟ

"ನಾವೆಲ್ಲರೂ ಅಪರಾಧಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದೆವು. ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿದೆ. ಪ್ರಕರಣವನ್ನು ನಮ್ಮಿಂದ ಬಲವಂತವಾಗಿ ಕಸಿದುಕೊಳ್ಳಲಾಗಿದೆ. ಅದು (ಕೋಲ್ಕತ್ತಾ) ಪೊಲೀಸರಲ್ಲಿದ್ದರೆ, ಅಪರಾಧಿಗೆ ಗಲ್ಲು ಶಿಕ್ಷೆಯನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೆವು" ಎಂದು ಸಿಎಂ ಹೇಳಿದರು.

"ತನಿಖೆ ಹೇಗೆ ನಡೆಸಲಾಯಿತು ಎಂದು ನಮಗೆ ಗೊತ್ತಿಲ್ಲ. ರಾಜ್ಯ ಪೊಲೀಸರು ತನಿಖೆ ನಡೆಸಿದ ಅನೇಕ ರೀತಿಯ ಪ್ರಕರಣಗಳಲ್ಲಿ ಮರಣದಂಡನೆಯನ್ನು ಖಚಿತಪಡಿಸಿಕೊಳ್ಳಲಾಗಿದೆ. ನನಗೆ ಈ ತೀರ್ಪು ತೃಪ್ತಿ ತಂದಿಲ್ಲ" ಎಂದು ಮಮತಾ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com