
ರಾಜ್‌ಗಢ: ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಂತೆ ಮಧ್ಯಪ್ರದೇಶದಲ್ಲಿ 27 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಯ್‌ಗಢ ಜಿಲ್ಲೆಯ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿ ಕಶ್ಯಪ್ ಭಾನುವಾರ ಬಿಯೋರಾ ಪಟ್ಟಣದ ತಮ್ಮ ಮನೆಯಲ್ಲಿ ಫ್ಯಾನ್ ಸೀಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಕಶ್ಯಪ್ ತನ್ನ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಪತ್ನಿ ಮತ್ತು ಅತ್ತೆ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಬಿಯೋರಾ ನಗರ ಪೊಲೀಸ್ ಠಾಣೆಯ ಉಸ್ತುವಾರಿ ವೀರೇಂದ್ರ ಧಕಡ್ ಹೇಳಿದ್ದಾರೆ. ತನಿಖೆಯ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ತನ್ನ ಹೆಂಡತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ತವರು ಮನೆಗೆ ಹೋಗುತ್ತಾಳೆ. ಹಿಂದಿರುಗಿದ ನಂತರ ನನ್ನ ಕುಟುಂಬದೊಂದಿಗೆ ಜಗಳವಾಡುತ್ತಾಳೆ. ಅತ್ತೆ ಕೂಡಾ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಪತ್ನಿಯನ್ನು ಮರಳಿ ಕರೆತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ ಆದರೆ ಆಕೆ ಒಂಟಿಯಾಗಿ ಬದುಕಲು ಬಯಸುತ್ತಿರುವುದಾಗಿ ಕಶ್ಯಪ್ ಹೇಳಿಕೊಂಡಿದ್ದಾರೆ.
Advertisement