ಪ್ರೀತಿಸಿದ ಗೆಳತಿಯನ್ನು ಮದುವೆಯಾಗಲು ಮುಸ್ಲಿಂ ವ್ಯಕ್ತಿ ಹಿಂದೂ ಧರ್ಮಕ್ಕೆ ಮತಾಂತರ!

ಮೂರು ದಿನಗಳ ಹಿಂದೆ, ಈ ಮಹಿಳೆ, ಸದ್ದಾಂ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮದುವೆ ನೆಪದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಸ್ತಿ: 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ 10 ವರ್ಷಗಳಿಂದ ಸಂಬಂಧ ಹೊಂದಿದ್ದ ತನ್ನ ಗೆಳತಿಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತನ್ನ ಹೆಸರನ್ನು ಸದ್ದಾಂ ಬದಲು ಶಿವಶಂಕರ್ ಎಂದು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ, ಈ ಮಹಿಳೆ, ಸದ್ದಾಂ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮದುವೆ ನೆಪದಲ್ಲಿ ಅತ್ಯಾಚಾರ, ಗರ್ಭಪಾತ ಮಾಡಿಸಲು ಒತ್ತಾಯ ಮತ್ತು ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಆದರೆ ಈಗ ಇಬ್ಬರೂ ತಮ್ಮ ಸ್ವಇಚ್ಛೆಯಿಂದ ವಿವಾಹವಾಗಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೇವೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ನಗರ ಬಜಾರ್ ನಿವಾಸಿ ಸದ್ದಾಂ ಹುಸೇನ್ ಸುಮಾರು 10 ವರ್ಷಗಳಿಂದ ತಮ್ಮ ಗ್ರಾಮದ(ಸುಮಾರು 30 ವರ್ಷ ವಯಸ್ಸಿನ) ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿರುವುದರಿಂದ ಮದುವೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಹುಡುಗಿ ಮದುವೆ ಮಾಡಿಕೊಳ್ಳುವಂತೆ ಸದ್ದಾಂ ಮೇಲೆ ಹಲವು ಬಾರಿ ಒತ್ತಡ ಹೇರಿದ್ದಳು. ಆದರೆ ಸದ್ದಾಂ ಕುಟುಂಬ ಅವಳನ್ನು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: ಮತಾಂತರ ಆರೋಪ; ದಲಿತನನ್ನು ಥಳಿಸಿ ತಲೆ ಬೋಳಿಸಿ, ಪರೇಡ್‌ ನಡೆಸಿದ ಬಜರಂಗದಳ!

ಇದರಿಂದ ತೊಂದರೆಗೀಡಾದ ಹುಡುಗಿ ಮೂರು ದಿನಗಳ ಹಿಂದೆ, ಯುವಕ ಸದ್ದಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ಗರ್ಭಪಾತ ಮಾಡಿಸಲು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಳು.

ಎಸ್ಪಿ ಆದೇಶದ ಮೇರೆಗೆ ಪೊಲೀಸರು ಸದ್ದಾಂ ಮತ್ತು ಅವರ ಕುಟುಂಬದ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಭಾನುವಾರ ರಾತ್ರಿ, ಸದ್ದಾಂ ಮತ್ತು ಹುಡುಗಿ ನಗರದ ಮಾರುಕಟ್ಟೆಯಲ್ಲಿರುವ ದೇವಾಲಯದಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದರು ಮತ್ತು ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಾಯಿಸಿಕೊಂಡರು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com